ಕನಕಪುರ :ಕಾಡಾನೆ ದಾಳಿಗೆ ಅಕ್ಕ ಸ್ಥಳದಲ್ಲೇ ಸಾವು, ತಂಗಿಗೆ ಗಂಭೀರ ಗಾಯ

ರಾಮನಗರ: ಅಕ್ಕ-ತಂಗಿ ಜಮೀನಿಗೆ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿದ್ದು, ಪರಿಣಾಮ ಅಕ್ಕ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಹಾಗೂ ತಂಗಿ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ.
ಕನಕಪುರ ತಾಲೂಕಿನ ಅಚ್ಚಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಕ್ಕ ಜಯಮ್ಮ (೫೦)ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ತಂಗಿ ವೆಂಕಟಲಕ್ಷ್ಮಮ್ಮ ಅವರು ಗಂಭೀರವಾಗಿ ಗಾಯಗೊಂಡಿದ್ದು ಕನಕಪುರ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಮೀನು ಕೆಲಸಕ್ಕೆ ಸಹೋದರಿಯರಿಬ್ಬರು ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕನಕಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ದಾಂಡೇಲಿ : ಗಂಡ ಹೆಂಡತಿಯ ಜಗಳ ; ಕೋಪದಲ್ಲಿ ಮಗುವನ್ನೇ ಮೊಸಳೆಗಳಿರುವ ನಾಲೆಗೆ ಎಸೆದ ತಾಯಿ

ನಿಮ್ಮ ಕಾಮೆಂಟ್ ಬರೆಯಿರಿ

advertisement