ಪೆಟ್ರೋಲ್, ಡೀಸೆಲ್ ದರಗಳಲ್ಲಿ ಮತ್ತೆ ಹೆಚ್ಚಳ

ನವದೆಹಲಿ: ದೇಶದಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 31 ರಿಂದ 35 ಪೈಸೆ ಮತ್ತು ಡೀಸೆಲ್ ದರ 35 ಪೈಸೆ ಹೆಚ್ಚಾಗಿದೆ.
ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ಶನಿವಾರ ದೇಶಾದ್ಯಂತ ಇಂಧನ ದರವನ್ನು ಮತ್ತೊಮ್ಮೆ ಹೆಚ್ಚಿಸಿದ್ದು, ಈ ಮೂಲಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೊಸ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿದೆ.
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮೂಲಗಳ ಪ್ರಕಾರ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 31 ರಿಂದ 35 ಪೈಸೆ ಮತ್ತು ಡೀಸೆಲ್ ದರ 35 ಪೈಸೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 101.45ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 94.04 ರೂ ಗೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 95.9ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 89.3 ರೂ ಗೆ ಏರಿಕೆಯಾಗಿದೆ.
ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 104.28 ರೂ.ಗಳಿಗೆ ಹೆಚ್ಚಳವಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 96.22 ರೂ ಗೆ ಏರಿಕೆಯಾಗಿದೆ. ಕೋಲ್ಕತ್ತಾದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 98.03 ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 91.55 ರೂ ಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 99.24 ರೂ. ಹಾಅಗೂ ಪ್ರತೀ ಲೀಟರ್ ಡೀಸೆಲ್ ದರ 93.28 ರೂ ಗೆ ಹೆಚ್ಚಳವಾಗಿದೆ..

ಪ್ರಮುಖ ಸುದ್ದಿ :-   ತಾಯಿಯ ಸಂಪತ್ತು ಉಳಿಸಿಕೊಳ್ಳಲು ಪಿತ್ರಾರ್ಜಿತ ತೆರಿಗೆ ಕಾನೂನು ರದ್ದುಗೊಳಿಸಿದ ರಾಜೀವ ಗಾಂಧಿ : ಪ್ರಧಾನಿ ಮೋದಿ ಆರೋಪ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement