ಕಾರ್ಕಳ: ನೈತಿಕ ಪೊಲೀಸ್ ಗಿರಿ ಆರೋಪ – ಐವರ ಬಂಧನ

ಉಡುಪಿ: ಜಿಲ್ಲೆಯ ಕಾರ್ಕಳದಲ್ಲಿ ಅನೈತಿಕ ಪೊಲೀಸ್ ಗಿರಿ ನಡೆಸಿದ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ‌ ಹೆಸರಾಂತ ಕಾಲೇಜಿನ ನಾಲ್ವರು ವೈದ್ಯರು ಹಾಗೂ ಅದೇ ಕಾಲೇಜಿನ ಇಬ್ಬರು ಮಹಿಳಾ ಪ್ರೊಫೆಸರ್ ಅವರು ಭಾನುವಾರ ಒಂದೇ ಕಾರಿನಲ್ಲಿ ಮಂಗಳೂರಿನಿಂದ ಶೃಂಗೇರಿಗೆ ತೆರಳಿ ಸಂಜೆ 4:30ರ ವೇಳೆಗೆ ಕಾರ್ಕಳದ ಕುಂಟಲ್ಪಾಡಿ ಮಾರ್ಗವಾಗಿ ಮಂಗಳೂರಿಗೆ ವಾಪಸ್ಸಾಗುತ್ತಿದ್ದರು. ಮಾಳ ಎಸ್ ಕೆ ಬಾರ್ಡರ್ ಬಳಿಯಿಂದ ಇವರ ಕಾರನ್ನು ಹಿಂಬಾಲಿಸಿ ಬಂದ ಮತ್ತೊಂದು ಕಾರು ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಒಂದೇ ಕಾರಿನಲ್ಲಿ ವಿಭಿನ್ನ ಕೋಮಿಗೆ ಸೇರಿದವರು ಎಲ್ಲಿಗೆ ಹೋಗುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ ಎಂದು ವರದಿಯಾಗಿದೆ.
ಕಾರಿನಲ್ಲಿದ್ದ ಮಹಿಳೆಯರು ನೇರವಾಗಿ 112ಕ್ಕೆ ಕರೆ ಮಾಡಿ ಘಟನೆಯ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ ನಂತರ ಘಟನಾ ಸ್ಥಳಕ್ಕೆ ಡಿವೈಎಸ್ಪಿ ಅರವಿಂದ ಕಲ್ಲಗುಜ್ಜೆ, ಪೊಲೀಸ್ ವೃತ್ತ ನಿರೀಕ್ಷಕ ನಾಗರಾಜ, ನಗರ ಠಾಣಾಧಿಕಾರಿ ಸಂದೀಪ ಶೆಟ್ಟಿ, ಗ್ರಾಮಾಂತರ ಠಾಣಾಧಿಕಾರಿ ದಿಲೀಪ ತೆರಳಿ ನೈತಿಕ ಪೊಲೀಸ್ ಗಿರಿ ತೋರ್ಪಡಿಸಿದ ಸಂಘಟನೆಯೊಂದರನ್ನು ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಸಂತೋಷ್ ನಂದಳಿಕೆ, ಕಾರ್ತಿಕ್ ಪೂಜಾರಿ, ಸುನೀಲ್ ಮೂಲ್ಯ ಮಿಯ್ಯಾರು, ಸಂದೀಪ್ ಪೂಜಾರಿ ಮಿಯ್ಯಾರು, ಸುಜಿತ್ ತೆಳ್ಳಾರು ಎಂಬವರನ್ನು ಬಂಧಿಸಿದ್ದಾರೆ‌. ಆರೋಪಿಗಳನ್ನು ನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಜಾಮೀನು ಮೇರೆಗೆ ಬಿಡುಗಡೆಗೊಳಿಸಲಾಗಿದೆ.

ಪ್ರಮುಖ ಸುದ್ದಿ :-   ಈಜಲು ತೆರಳಿದ್ದ ನಾಲ್ವರು ಬಾಲಕರು ನೀರುಪಾಲು

2 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement