ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಯುವಕರು ಸಾವಿಗೀಡಾದ ಘಟನೆ ಬೆಂಗಳೂರಿನಲ್ಲಿ ಬುಧವಾರ (ಏಪ್ರಿಲ್‌ 25) ಮಧ್ಯಾಹ್ನ ನಡೆದಿದೆ.
ಬೆಂಗಳೂರಿನ ಬೈಯಪ್ಪನಹಳ್ಳಿ ಬಳಿ ಮೂವರು ರೈಲಿಗೆ ಸಿಲುಕಿ ಮೃತಪಟ್ಟಿದ್ದು, ಇವರು ಆಂಧ್ರಪ್ರದೇಶದ ಮೂಲದ ಚಿತ್ತೂರಿನ ಮೂಲದವರು ಎಂದು ತಿಳಿದು ಬಂದಿದೆ. ಶಶಿಕುಮಾರ (23), ಲೋಕೇಶ (25) ಎಂಬ ಇಬ್ಬರು ಮೃತರನ್ನು ಗುರುತಿಸಲಾಗಿದೆ. ಮತ್ತೋರ್ವನ ಗುರುತು ಪತ್ತೆಯಾಗಿಲ್ಲ. ಮೂವರು ಯಾವ ಕಾರಣಕ್ಕೆ ಹಳಿ ಮೇಲೆ ಬಂದಿದ್ದರು. ಇದು ಆತ್ಮಹತ್ಯೆಯೋ ಅಥವಾ ಬೇರೆ ಏನಾದರೂ ಕಾರಣವಿದೆಯೋ ಎಂಬುದು ಗೊತ್ತಾಗಿಲ್ಲ. ಘಟನಾ ಸ್ಥಳಕ್ಕೆ ಆಗಮಿಸಿದ ಬೈಯಪ್ಪನಹಳ್ಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ, ಇನ್ನೂ ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಅಂಜಲಿ ಹತ್ಯೆ ಆರೋಪಿ ಬಂಧನ ; ಈತನ ಬಂಧನವಾಗಿದ್ದೇ ರೋಚಕ

ನಿಮ್ಮ ಕಾಮೆಂಟ್ ಬರೆಯಿರಿ

advertisement