ಸಿಇಟಿ ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ: ಹೊಸ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಬದಲಾವಣೆ ಮಾಡಿದ್ದು, ಏಪ್ರಿಲ್ 18 ಮತ್ತು 19ರಂದು ಪರೀಕ್ಷೆಗಳು ನಡೆಯಲಿವೆ. ಈ ಮೊದಲು ಏಪ್ರಿಲ್ 20 ಮತ್ತು 21ರಂದು ಪರೀಕ್ಷೆ ನಿಗದಿಯಾಗಿತ್ತು.
ಕನ್ನಡ ಪರೀಕ್ಷೆ ಏಪ್ರಿಲ್ 20ರಂದು ನಡೆಯಲಿದೆ’ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ. ಏಪ್ರಿಲ್ 21ರಂದು ಎನ್‌ಡಿಎ ಪರೀಕ್ಷೆ ನಡೆಯುತ್ತಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ದಿನಾಂಕ ಬದಲಾವಣೆ ಮಾಡುವಂತೆ ಕೋರಿದ್ದರು. ಹೀಗಾಗಿ ಪರೀಕ್ಷೆ ದಿನಾಂಕವನ್ನು ಬದಲಾವಣೆ ಮಾಡಿರುವುದಾಗಿ ತಿಳಿಸಿದ್ದಾರೆ.

ವೃತ್ತಿಪರ ಕೋರ್ಸುಗಳಿಗೆ ಸೇರಲು ಬಯಸುವ ಅಭ್ಯರ್ಥಿಗಳು ಸಿಇಟಿ ಪರೀಕ್ಷೆಗೆ ಜನವರಿ 10ರಿಂದ ಫೆಬ್ರವರಿ 10ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳಿಗೆ (CET Exam) 2024-25ರಲ್ಲಿ ಪ್ರವೇಶಾತಿ ಬಯಸುವವರಿಗಾಗಿ ಸಿಇಟಿ ನಡೆಸಲಾಗುತ್ತಿದ್ದು, ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಬಿಪಿಟಿ, ಬಿಪಿಒ, ಬಿಎಸ್ಸಿ ಅಲೈಡ್ ಹೆಲ್ತ್ ಸೈನ್ಸ್ ಕೋರ್ಸುಗಳಿಗೆ ಸೇರಲು ಬಯಸುವ ಅಭ್ಯರ್ಥಿಗಳೂ ಈಗಲೇ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬೇಕೆಂದು ಸೂಚಿಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಸರಿಯಾದ ಆರ್‌.ಡಿ. ಸಂಖ್ಯೆ, ಜಾತಿ/ಆದಾಯ ಪ್ರಮಾಣಪತ್ರ ಮತ್ತು ಕಲ್ಯಾಣ ಕರ್ನಾಟಕ (371ಜೆ) ಪ್ರಮಾಣಪತ್ರಕ್ಕೆ ಸಂಬಂಧಿಸಿದ ಅಗತ್ಯ ವಿವರಗಳನ್ನು ದಾಖಲಿಸಬೇಕು. ಸಿಇಟಿ ಪ್ರಕ್ರಿಯೆಯಲ್ಲಿ ಸುಧಾರಣೆ ತರುವ ಭಾಗವಾಗಿ ಈ ಬಾರಿ ಅರ್ಜಿಯನ್ನು ‘ಅರ್ಜಿ ಹಾಗೂ ಪರಿಶೀಲನೆ’ ನಮೂನೆಯಲ್ಲಿ ಹೊರತರಲಾಗಿದೆ. ಇದರಿಂದಾಗಿ, ಅಭ್ಯರ್ಥಿಗಳ ದಾಖಲಾತಿಗಳನ್ನು ಭೌತಿಕವಾಗಿ ಪರಿಶೀಲಿಸುವ ಸಮಯ ಉಳಿತಾಯವಾಗಲಿದೆ ಎಂದು ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮೇ 10ರ ವರೆಗೆ ಮಳೆ ಮುನ್ಸೂಚನೆ

 

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement