ದೆಹಲಿಯಲ್ಲಿ ಹುಡುಕಾಡಿದರೂ ಮುಂಬೈ ಪೊಲೀಸರಿಗೆ ಸಿಗದ ನೂಪುರ್ ಶರ್ಮಾ

ನವದೆಹಲಿ: ಸುದ್ದಿ ವಾಹಿನಿಯೊಂದರಲ್ಲಿ ಪ್ರವಾದಿ ಮುಹಮ್ಮದ್ ಕುರಿತು ಹೇಳಿಕೆ ನೀಡಿರುವುದಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಬಿಜೆಪಿ ವಕ್ತಾರ ನೂಪುರ್ ಶರ್ಮಾ ಅವರ ವಿರುದ್ಧ ಹಲವು ರಾಜ್ಯಗಳಲ್ಲಿ ಪೊಲೀಸ್ ಪ್ರಕರಣಗಳು ದಾಖಲಾಗಿದ್ದು, ಆದರೆ ನೂಪುರ ಶರ್ಮಾ ಅವರು ಇನ್ನೂ ಮುಂಬೈ ಪೊಲೀಸರಿಗೆ ಪತ್ತೆಯಾಗಿಲ್ಲ.
ಮುಸ್ಲಿಮ್ ಸಂಘಟನೆಯಾದ ರಾಝಾ ಅಕಾಡೆಮಿಯ ಜಂಟಿ ಕಾರ್ಯದರ್ಶಿ ಇರ್ಫಾನ್ ಶೇಖ್ ಅವರ ದೂರಿನ ಆಧಾರದ ಮೇಲೆ ಮುಂಬೈ ಪೊಲೀಸರು ಮೇ 28 ರಂದು ದೆಹಲಿ ನಿವಾಸಿ ಶರ್ಮಾ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದರು.
ಶರ್ಮಾ ಅವರನ್ನು ಪ್ರಶ್ನಿಸಲು ದೆಹಲಿಯಲ್ಲಿರುವ ಮುಂಬೈ ಪೊಲೀಸ್ ತಂಡವು ಅವರನ್ನು ಹುಡುಕಾಟ ನಡೆಸಿದ್ದು ಆದರೆ ಸಿಗಲಿಲ್ಲ, ಪತ್ತೆಹಚ್ಚಲಾಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.

ನೂಪುರ್‌ ಅವರನ್ನು ಬಂಧಿಸಲು ಮುಂಬೈ ಪೊಲೀಸರ ಬಳಿ ಸಾಕಷ್ಟು ಪುರಾವೆಗಳಿವೆ ಎಂದು ಮಹಾರಾಷ್ಟ್ರ ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ. ಮುಂಬೈ ಪೊಲೀಸ್ ತಂಡ ಕಳೆದ ಐದು ದಿನಗಳಿಂದ ದೆಹಲಿಯಲ್ಲಿ ತಂಗಿದ್ದು, ಶರ್ಮಾ ಅವರನ್ನು ಹುಡುಕುತ್ತಿದೆ.

ತೃಣಮೂಲ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಅಬುಲ್ ಸೊಹೈಲ್ ಅವರ ದೂರಿನ ಆಧಾರದ ಮೇಲೆ ಕೋಲ್ಕತ್ತಾ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಜೂನ್ 20 ರಂದು ತನ್ನ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಕೋಲ್ಕತ್ತಾ ಪೊಲೀಸರು ಸಮನ್ಸ್ ನೀಡಿದ್ದಾರೆ. ಪ್ರವಾದಿ ಮೊಹಮ್ಮದ್ ಕುರಿತು ಹೇಳಿಕೆ ನೀಡಿರುವ ಶರ್ಮಾ ವಿರುದ್ಧ ದೆಹಲಿ ಪೊಲೀಸರು ಮತ್ತೊಂದು ಎಫ್‌ಐಆರ್ ದಾಖಲಿಸಿದ್ದಾರೆ.
ಟಿವಿಯಲ್ಲಿ ಪ್ರವಾದಿ ಮುಹಮ್ಮದ್ ಕುರಿತು ಮಾಡಿದ ಕಾಮೆಂಟ್‌ಗಳಿಗೆ ಇರಾನ್, ಇರಾಕ್, ಕುವೈತ್, ಕತಾರ್ ಮತ್ತು ಸೌದಿ ಅರೇಬಿಯಾ ಸೇರಿದಂತೆ ಕನಿಷ್ಠ 15 ರಾಷ್ಟ್ರಗಳಿಂದ ತೀವ್ರ ಪ್ರತಿಕ್ರಿಯೆಗಳು ಬಂದ ನಂತರ ಶ್ರೀಮತಿ ಶರ್ಮಾ ಅವರನ್ನು ಬಿಜೆಪಿ ಅಮಾನತುಗೊಳಿಸಿದೆ. ನಂತರ ಶರ್ಮಾ ಅವರು “ಬೇಷರತ್ತಾಗಿ” ತಮ್ಮ ಹೇಳಿಕೆಯನ್ನು ಹಿಂತೆಗೆದುಕೊಂಡರು ಮತ್ತು ಭಗವಾನ್ ಶಿವನ ಕುರಿತು ನಿರಂತರ ಅವಮಾನ ಮತ್ತು ಅಗೌರವಕ್ಕೆ ಪ್ರತಿಕ್ರಿಯೆಯಾಗಿ ಹೇಳಿರುವುದಾಗಿ ಅವರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಇಂಗ್ಲೆಂಡ್ ಟೆಸ್ಟ್ ಸರಣಿಗೆ ಭಾರತದ ಕ್ರಿಕೆಟ್‌ ತಂಡ ಪ್ರಕಟ ; ಶುಭಮನ್ ಗಿಲ್ ನೂತನ ನಾಯಕ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement