ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

 ಬೆಂಗಳೂರು : ಬೆಂಗಳೂರು ಸೇರಿ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಎರಡ್ಮೂರು ದಿನ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಾವಣಗೆರೆ, ಚಿತ್ರದುರ್ಗ, ವಿಜಯನಗರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ರಾಮನಗರ, ಮಂಡ್ಯ, ಕೋಲಾರ, ಹಾಸನ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಶನಿವಾರ ಮಳೆಯಾಗಿದೆ. ಉತ್ತರ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯಾಗಿದೆ. ಚಾಮರಾಜನಗರದ ಬೇಗೂರು 9 ಸೆಂ.ಮೀ ಮಳೆಯಾಗಿದೆ. ಕೃಷ್ಣರಾಜಸಾಗರ 8, ಗುಂಡ್ಲುಪೇಟೆ 7, ಬಂಡೀಪುರ 5, ಭಾಗಮಂಡಲ 3, ಕೃಷ್ಣರಾಜಪೇಟೆ 3, ಎಚ್ ಡಿ ಕೋಟೆ 3, ಮಂಡ್ಯ ಪಿಟಿಒ 3, ಕೋಲಾರ 2, ಶ್ರೀರಂಗಪಟ್ಟಣ 2, ರಾಯಲ್ಪಾಡು 2, ಶಿಗ್ಗಾಂವ್ 1, ಹುಬ್ಬಳ್ಳಿ 1, ಕೆ ಆರ್ ನಗರದಲ್ಲಿ ತಲಾ 1 ಸೆಂಮೀ ಮಳೆ ವರದಿಯಾಗಿದೆ.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿಗೆ ಪೂರ್ಣ ಬಹುಮತ ; ಪೀಪಲ್ಸ್ ಪಲ್ಸ್ ಸಮೀಕ್ಷೆಯಲ್ಲಿ ಬಹಿರಂಗ....

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement