ಕೆಪಿಎಸ್‌ಸಿ ಎಇಇ ನೇಮಕಾತಿಯಲ್ಲಿ ಅಕ್ರಮ ಆರೋಪ : ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಎಚ್‌ಡಿಕೆ ಆಗ್ರಹ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ಹಗರಣದ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಪ್ರಿಯಾಂಕ್ ಖರ್ಗೆ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಮಂತ್ರಿಯಾಗಿದ್ದಾಗ 2022ರಲ್ಲಿ ಕರ್ನಾಟಕ ಲೋಕಸೇವಾ ಆಯೋಗದ (KPSC) ಮೂಲಕ ನಡೆದಿರುವ ಸಹಾಯಕ ಎಕ್ಸಿಕ್ಯೂಟಿವ್ ಎಂಜಿನಿಯರ್ (AEE) ಗ್ರೇಡ್ 1 ಹುದ್ದೆಗಳ ಆಯ್ಕೆ ಮತ್ತು ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಅವರು ಗಂಭೀರ ಆರೋಪ ಮಾಡಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಈ ಅಕ್ರಮ ನೇಮಕಾತಿಗೆ ಸಚಿವ ಪ್ರಿಯಾಂಕ್ ಖರ್ಗೆ ಅವರೇ ಜವಾಬ್ದಾರಿ ಹೊತ್ತು ಸಚಿವ ಸ್ಥಾನಕ್ಕೆ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
 ಅಂತಿಮ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳುವ ಮೊದಲೇ ಕೆಪಿಎಸ್‌ಸಿಯೊಳಗೆ ಒಎಂಆರ್‌ (OMR) ಉತ್ತರ ಪತ್ರಿಕೆಗಳ ತಿರುಚುವಿಕೆ, ಕಾಣೆಯಾಗಿರುವ ಸಿಸಿಟಿವಿ (CCTV) ದೃಶ್ಯಾವಳಿಗಳು ಹಾಗೂ ನಿಯಮ ಉಲ್ಲಂಘನೆಗಳ ಕುರಿತು ಆಕ್ಷೇಪಗಳು ವ್ಯಕ್ತವಾಗಿದ್ದವು. ಆದರೂ ನೇಮಕಾತಿಗೆ ಅವಕಾಶ ನೀಡಲಾಗಿದೆ ಎಂದು ಆರೋಪಿಸಿದರು. “ಅಕ್ರಮ ಮಾರ್ಗದಿಂದ ಆಯ್ಕೆಯಾಗಲು ಯತ್ನಿಸಿದ ಅಭ್ಯರ್ಥಿಗಳ ನೇಮಕಾತಿಯನ್ನು ತಡೆಹಿಡಿಯಬೇಕು ಎಂದು ಕೆಪಿಎಸ್‌ಸಿ ಶಿಫಾರಸು ಮಾಡಿದ್ದರೂ, ಅವರನ್ನು ರಕ್ಷಿಸುವ ಕೆಲಸ ಮಾಡಲಾಯಿತು. ಆ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಜವಾಬ್ದಾರಿ ಹೊಂದಿದ್ದ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಕುಮಾರಸ್ವಾಮಿ, ಕೆಪಿಎಸ್‌ಸಿ ನೇಮಕಾತಿಗಳಲ್ಲಿನ ಅಕ್ರಮಗಳ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಕಳೆದ ಕೆಲವು ದಿನಗಳಿಂದ ಕೆಪಿಎಸ್‌ಸಿ ಸಂಬಂಧಿತ ಬೆಳವಣಿಗೆಗಳನ್ನು ಗಮನಿಸುತ್ತಿರುವುದಾಗಿ ಹೇಳಿದರು. “ಪಶುವೈದ್ಯಾಧಿಕಾರಿ ಹುದ್ದೆಗೆ ನೇಮಕವಾಗಲು ₹80 ಲಕ್ಷ ಲಂಚ ನಿಗದಿಪಡಿಸಲಾಗಿತ್ತು ಎಂದು ಒಬ್ಬ ಯುವಕ ಆರೋಪಿಸಿದ್ದಾನೆ. ಆ ಆರೋಪದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಕಳೆದ ಒಂದು ವಾರದಿಂದ ಹಲವು ಕಡೆ ದಾಳಿ ನಡೆಸಿದೆ. ಆದರೆ ಸರ್ಕಾರ ಜವಾಬ್ದಾರಿಯಿಂದ ನಡೆದುಕೊಳ್ಳುವ ಬದಲು, ಪರೀಕ್ಷಾ ಪ್ರಕ್ರಿಯೆಯ ಪ್ರಮುಖ ಜವಾಬ್ದಾರರಾಗಿದ್ದ ಪರೀಕ್ಷಾ ನಿಯಂತ್ರಕರಿಗೆ ರಾಜ್ಯ ಬಿಟ್ಟು ಹೋಗಲು ಅವಕಾಶ ನೀಡಿದೆ” ಎಂದು ಆರೋಪಿಸಿದರು.
 ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, “ಆ ಅಧಿಕಾರಿ ತಂದೆಯ ಆರೋಗ್ಯ ವಿಚಾರಕ್ಕಾಗಿ ಹಿರಿಯ ಅಧಿಕಾರಿಗಳ ಅನುಮತಿ ಪಡೆದು ಹೊರ ಹೋಗಿದ್ದಾರೆ ಎಂದು ಗೃಹ ಸಚಿವರು ಮಾಧ್ಯಮಗಳಿಗೆ ಹೇಳಿದ್ದರು. ಆದರೆ ವಾಸ್ತವದಲ್ಲಿ ಅವರು ನಾಪತ್ತೆಯಾಗಿದ್ದಾರೆ. ಈಗ ಅವರಿರುವ ಸ್ಥಳವೇ ಗೊತ್ತಿಲ್ಲ ಎಂದು ಹೇಳುತ್ತಿದ್ದಾರೆ” ಎಂದರು.
https://x.com/NewsArenaIndia/status/2093211547829182772
ಎಕ್ಸಿಕ್ಯೂಟೀವ್ ಎಂಜಿನಿಯರ್ ಗ್ರೇಡ್ 1 ಹುದ್ದೆಗಳ ನೇಮಕಾತಿಯಲ್ಲಿನ ಅಕ್ರಮದಲ್ಲಿ ಭಾಗಿಯರುವ ಆರೋಪ ಎದುರಿಸುತ್ತಿರುವ ಅಂದು ಪರೀಕ್ಷಾ ನಿಯಂತ್ರಕರಾಗಿದ್ದ ಐಪಿಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ ಅವರನ್ನು ಪ್ರಿಯಾಂಕ್ ಖರ್ಗೆ ರಕ್ಷಣೆ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರು ನೇರ ಆರೋಪ ಮಾಡಿದರು.
“ಒಂದೆಡೆ ಆಡಳಿತದಲ್ಲಿ ಪಾರದರ್ಶಕತೆ ತರುತ್ತೇವೆ ಎಂದು ಹೇಳುವ ಸರ್ಕಾರ, ಮತ್ತೊಂದೆಡೆ ಭ್ರಷ್ಟ ಅಧಿಕಾರಿಗಳನ್ನು ರಕ್ಷಿಸಿ, ರಾಜ್ಯದಿಂದ ತಪ್ಪಿಸಿಕೊಳ್ಳಲು ನೆರವಾಗುತ್ತಿದೆ. ಇದಕ್ಕೆ ಗೃಹ ಸಚಿವರ ಬೆಂಬಲವಿದೆ” ಎಂದು ಅವರು ಆರೋಪಿಸಿದರು.
ಎಕ್ಸಿಕ್ಯೂಟೀವ್ ಎಂಜಿನಿಯರ್ ಗ್ರೇಡ್ 1 ಹುದ್ದೆಗಳ ನೇಮಕಾತಿಯಲ್ಲಿನ ಅಕ್ರಮದಲ್ಲಿ ಭಾಗಿಯರುವ ಆರೋಪ ಎದುರಿಸುತ್ತಿರುವ ಅಂದು ಪರೀಕ್ಷಾ ನಿಯಂತ್ರಕರಾಗಿದ್ದ ಐಪಿಎಸ್ ಅಧಿಕಾರಿಯನ್ನು ಪ್ರಿಯಾಂಕ್ ಖರ್ಗೆ ರಕ್ಷಣೆ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರು ನೇರ ಆರೋಪ ಮಾಡಿದರು.
 ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿನ ಅಕ್ರಮಗಳ ತನಿಖೆಯ ಭಾಗವಾಗಿ ಇ.ಡಿ. ಅಧಿಕಾರಿಗಳು ಬೆಂಗಳೂರಿನ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ ನಿವಾಸದ ಮೇಲೆ ಶೋಧ ನಡೆಸಿದ ಬಳಿಕ ಅವರು ನಾಪತ್ತೆಯಾಗಿದ್ದಾರೆ ಎಂಬ ಆರೋಪಗಳ ನಡುವೆಯೇ ಕುಮಾರಸ್ವಾಮಿ ಈ ಹೇಳಿಕೆ ನೀಡಿದ್ದಾರೆ. ಈ ಪ್ರಕರಣದಲ್ಲಿ ಇ.ಡಿ. ಈಗಾಗಲೇ ಮಾಜಿ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಹಾಗೂ ಇತರರ ನಿವಾಸಗಳ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.  ಕೆಪಿಎಸ್‌ಸಿ ಅಧ್ಯಕ್ಷರನ್ನೂ ಅಮಾತು ಮಾಡಲಾಗಿದೆ.
ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement