ಜೀವ ಬೆದರಿಕೆ : ದೂರು ದಾಖಲಿಸಿದ ಪ್ರಮೋದ ಮುತಾಲಿಕ

ಧಾರವಾಡ: ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಅಪರಿಚತ ವ್ಯಕ್ತಯಿಂದ ಜೀವ ಬೆದರಿಕೆ ಸಂದೇಶವೊಂದು ಬಂದಿದೆ ಎಂದು ವರದಿಯಾಗಿದೆ.
ಅಪರಿಚಿತ ಮೊಬೈಲ್ ನಂಬರ್‌ನಿಂದ ವಾಟ್ಸಪ್ ಬಂದ ವಾಯ್ಸ್ ಮೆಸೇಸ್‌ನಲ್ಲಿ ಆ ವ್ಯಕ್ತಿ ಪ್ರಮೋದ್ ಮುತಾಲಿಕ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ ಜೀವ ಬೆದರಿಕೆ ಕೂಡ ಹಾಕಿದ್ದಾನೆ ಎಂದು ಮುತಾಲಿಕ್‌ ಅವರು ಆ ವ್ಯಕ್ತಿಯ ಮೇಲೆ ಧಾರವಾಡದ ಉಪನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬೆದರಿಕೆ ಸಂದೇಶ ಕಳುಹಿಸಿರುವ ವ್ಯಕ್ತಿ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಐದು ವಾಯ್ಸ್‌ ಸಂದೇಶಗಳಲ್ಲಿ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ.

4 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್ ಪ್ರಕರಣದ ಹಿಂದೆ ಡಿಕೆ ಶಿವಕುಮಾರ ಕೈವಾಡ : ವಕೀಲ ದೇವರಾಜೇಗೌಡ ಗಂಭೀರ ಆರೋಪ

ನಿಮ್ಮ ಕಾಮೆಂಟ್ ಬರೆಯಿರಿ

advertisement