ಎಐಸಿಸಿ ಅಧ್ಯಕ್ಷ ಖರ್ಗೆಗೆ ನಿಂದನೆ ಆರೋಪ: ಸೂಲಿಬೆಲೆ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

ಕಲಬುರಗಿ : ಕಾಂಗ್ರೆಸ್‌ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ್ದಾರೆಂದು ಆರೋಪಿಸಿ ಗುರಿಯಾಗಿ ಜಾತಿ ನಿಂದನೆ ಪ್ರಕರಣ ಎದುರಿಸುತ್ತಿರುವ ನಮೋ ಬ್ರಿಗೇಡ್‌ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್‌ನ ಕಲಬುರ್ಗಿ ಪೀಠವು ಮಂಗಳವಾರ ತಡೆಯಾಜ್ಞೆ ನೀಡಿದೆ.
ರಾಜಕೀಯ ಕಾರಣಕ್ಕಾಗಿ ತನ್ನ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸಬೇಕು ಎಂದು ಕೋರಿ ಚಕ್ರವರ್ತಿ ಸೂಲಿಬೆಲೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ರಾಜೇಂದ್ರ ಬದಾಮಿಕರ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ಹಿರಿಯ ವಕೀಲ ಅರುಣ್‌ ಶ್ಯಾಮ ಅವರು ವಾದ ಮಂಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ಪೀಠವು ಎಫ್‌ಐಆರ್‌ಗೆ ತಡೆ ನೀಡಿ, ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿತು.

ನಮೋ ಬ್ರಿಗೇಡ್‌ ವತಿಯಿಂದ ಜನವರಿ 18ರಂದು ರಾಯಚೂರಿನ ಸಿರಿವಾರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಲ್ಲಿ ಭಾಗವಹಿಸಿದ್ದ ಸೂಲಿಬೆಲೆ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಯೋಗ್ಯ ಎಂದು ನಿಂದಿಸಿದ್ದಲ್ಲದೇ ಆಧಾರರಹಿತವಾಗಿ ಸುಳ್ಳು ಭಾಷಣ ಮಾಡಿ ಕೋಮು ದ್ವೇಷ ಹರಡು ಪ್ರಯತ್ನ ಮಾಡಿದ್ದಾರೆ. ಈ ಹಿಂದೆಯೂ ಇದೇ ರೀತಿ ಮಹಿಳೆಯರ ಬಗ್ಗೆ ಲಘುವಾಗಿ ಮಾತನಾಡಿದ ಆರೋಪದ ಮೇಲೆ ಪ್ರಕರಣ ಎದುರಿಸುತ್ತಿದ್ದಾರೆ ಎಂದು ಸೂಲಿಬೆಲೆ ಭಾಷಣದ ಡಿವಿಡಿಗಳನ್ನು ಒಳಗೊಂಡ ದೂರನ್ನು ಕಲಬುರ್ಗಿ ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಜಗದೇವ ಗುತ್ತೇದಾರ್‌ ಕಾಳಗಿ ಅವರು ಕಲಬರ್ಗಿಯ ಬ್ರಹ್ಮಾಪುರ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿ, ಅದನ್ನು ರಾಯಚೂರು ಜಿಲ್ಲೆಯ ಸಿರಿವಾರ ಠಾಣೆಗೆ ವರ್ಗಾಯಿಸಲಾಗಿತ್ತು.

ಪ್ರಮುಖ ಸುದ್ದಿ :-   ಇನ್ಮುಂದೆ ಎಸ್ ​ಎಸ್ಎ ಲ್ ​ಸಿಗೆ ಗ್ರೇಸ್ ಮಾರ್ಕ್ಸ್ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement