ಹೊನ್ನಾವರ : ಕೈಯಲ್ಲಿದ್ದ ಏರ್ಗನ್ ನಿಂದ ಆಕಸ್ಮಿಕವಾಗಿ ಸಿಡಿದ ಗುಂಡು ತಗುಲಿ ಯುವಕನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ ಸಮೀಪದ ಹಾಡಗೇರಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಮೃತನನ್ನು ಸ್ಥಳೀಯ ನಿವಾಸಿ ಸುಬ್ರಹ್ಮಣ್ಯ (19) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ಮಂಗಗಳನ್ನು ಓಡಿಸಲು ಕೈಯಲ್ಲಿ ಏರ್ಗನ್ ಹಿಡಿದು ಹೋಗುವಾಗ ಆಕಸ್ಮಾತ್ ಈತ ಜಾರಿ ಕೆಳಗೆ ಬಿದ್ದಿದ್ದು, ಈ ವೇಳೆ ಏರ್ಗನ್ನಲ್ಲಿದ್ದ ಗುಂಡು ಸಿಡಿದು ಈತನ ಎದೆಗೆ ತಗುಲಿದೆ ಎನ್ನಲಾಗಿದೆ.
ಗುಂಡು ಸಿಡಿದ ಶಬ್ದ ಕೇಳಿ ಮನೆಯವರು ಓಡಿ ಬರುವಷ್ಟರಲ್ಲಿ ಸುಬ್ರಹ್ಮಣ್ಯ ಕುಸಿದು ಬಿದ್ದಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಈತ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ ಎನ್ನಲಾಗಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ