ಆನ್‌ಲೈನ್ ನಲ್ಲಿ ಸಾಲ : ಕಿರುಕುಳ ತಡೆಯಲಾರದೆ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು : ಚೀನಾ ಆ್ಯಪ್ ಮೂಲಕ ಆನ್ಲೈನ್ ನಲ್ಲಿ ಸಾಲ ಪಡೆದಿದ್ದ ಇಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬ ಸಾಲ ನೀಡಿದವರ ಕಿರುಕುಳ ತಡೆಯಲಾರದೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದ ವರದಿಯಾಗಿದೆ.
ಬೆಂಗಳೂರು ನಗರದ ಹೆಚ್​ಎಂಟಿ ಕ್ವಾರ್ಟರ್ಸ್​ನಲ್ಲಿ ಈ ಘಟನೆ ನಡೆದಿದ್ದು ತೇಜಸ್ (೨೧) ಎಂಬಾತ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಈತ ಯಲಹಂಕದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕಾನಿಕಲ್ ಇಂಜಿನಿಯರಿಂಗ್ ಆರನೇ ಸೆಮಿಸ್ಟರ್ ನಲ್ಲಿ ಓದುತ್ತಿದ್ದು, ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಎನ್ನಲಾಗಿದೆ. ಸ್ನೇಹಿತ ಮಹೇಶ​ ಎಂಬಾತನಿಗೆ ಸ್ಲೈಲ್ಸ್ ಪೇ, ಕಿಸಾತ್ ಹಾಗೂ ‌ಕೋಟಕ್ ಮಹೀಂದ್ರಾ ಮೂಲಕ ತನ್ನ ಸ್ನೇಹಿತನಿಗಾಗಿ ಪಡೆದಿದ್ದ ಎನ್ನಲಾಗಿದೆ. ಆದರೆ ಕಳೆದ ಒಂದು ವರ್ಷದಿಂದ ಸ್ನೇಹಿತ ಇಎಂಐ ಕಟ್ಟಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಾಲ ನೀಡಿದವರು ಈತನಿಗೆ ಪೀಡಿಸುತ್ತಿದ್ದರು ಎನ್ನಲಾಗಿದೆ. ಇದರಿಂದ ಹತಾಶನಾದ ವಿದ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ತನ್ನ ತಾಯಿಯ ವೇಲ್​ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.
ಅಮ್ಮ ಅಪ್ಪ ನನ್ನನ್ನು ಕ್ಷಮಿಸಿ. ನಾನು ಮಾಡಿರುವ ತಪ್ಪಿಗೆ ಬೇರೆ ದಾರಿಯಿಲ್ಲ. ನಾನು ಮಾಡಿರುವ ಸಾಲ ತೀರಿಸಲು ಆಗೋದಿಲ್ಲ ಅದಕ್ಕಾಗಿ ಇದು ನನ್ನ ಕೊನೆಯ ತೀರ್ಮಾನ. ಥ್ಯಾಂಕ್ಸ್ ಗುಡ್ ಬಾಯ್ ಎಂದು ತೇಜಸ್ ಬರೆದುಕೊಂಡಿದ್ದಾನೆ ಎನ್ನಲಾಗಿದೆ. ಜಾಲಹಳ್ಳಿ ಪೊಲೀಸ್ ಠಾಣೆಗೆ ತೇಜಸ್ ಪೋಷಕರು ದೂರು ನೀಡಿದಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ : ಕರ್ನಾಟಕದ ಮೊದಲ ಹಂತದಲ್ಲಿ ಶೇ. 69.23 ಮತದಾನ ; 14 ಕ್ಷೇತ್ರಗಳ ಮತದಾನದ ಪ್ರಮಾಣದ ವಿವರ...

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement