ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಎರಡು ದಿನ ಸಾಧಾರಣ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಮುಂದಿನ 2 ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು, ಮಂಗಳವಾರ ಸ್ವಲ್ಪ ಜೋರಾಗಿ ಮಳೆಯಾಗುವ ಸಾಧ್ಯತೆಯಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಕೆಲವು ಜಿಲ್ಲೆಗಳು, ತಮಿಳುನಾಡು, ಪುದುಚೇರಿ ಹಾಗೂ ಆಂದ್ರಪ್ರದೇಶದ ಕರಾವಳಿಯಲ್ಲಿ ಮಳೆಯಾಗುತ್ತಿದೆ. ಇನ್ನೂ 2 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ.

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಗಳು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಹಾವೇರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬಂಗಾಳಕೊಲ್ಲಿಯ ಮಧ್ಯ ಭಾಗಗಳಲ್ಲಿ ಕಡಿಮೆ ಉಷ್ಣವಲಯದ ಮಟ್ಟದಲ್ಲಿ ಚಂಡಮಾರುತದ ಪರಿಚಲನೆ ಇರುವುದರಿಂದ ಈಶಾನ್ಯ ಮಾನ್ಸೂನ್ ಮಾರುತದಿಂದ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಲಕ್ಷದ್ವೀಪಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಪ್ರಮುಖ ಸುದ್ದಿ :-   ಮಟನ್ ಊಟದಲ್ಲಿ ನಿದ್ರೆ ಮಾತ್ರೆ...ಶವಗಳಿಗೆ ಅಡ್ಹೆಸಿವ್ ಟೇಪ್ ಸುತ್ತಿ ಸಾಗಾಟ...ಮೃತರ ಮೊಬೈಲ್‌ನಿಂದ ಮೆಸೇಜ್‌ : 7 ಜನರ ಹತ್ಯೆ ಆರೋಪಿಯ ಖತರ್ನಾಕ್‌ ಪ್ಲಾನ್‌

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement