ಬೆಂಗಳೂರಲ್ಲಿ ಬೋಯಿಂಗ್ ತಂತ್ರಜ್ಞಾನ ಕ್ಯಾಂಪಸ್‌ ಉದ್ಘಾಟಸಿದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ದೇವನಹಳ್ಳಿ ಸಮೀಪ ಬೋಯಿಂಗ್‌ ಇಂಡಿಯಾ ಎಂಜಿನಿಯರಿಂಗ್‌ ಮತ್ತು ಟೆಕ್ನಾಲಜಿ ಸೆಂಟರ್‌ (BIETC) ಕ್ಯಾಂಪಸ್‌ (BIETC Campus) ಶುಕ್ರವಾರ ಲೋಕಾರ್ಪಣೆ ಮಾಡಿದರು. ಪ್ರಧಾನಿ ಮೋದಿ ಅವರು ಇದೇ ಕಾರ್ಯಕ್ರಮದಲ್ಲಿ ಬೋಯಿಂಗ್‌ ಸುಕನ್ಯಾ (Boeing sukanya programme) ಎಂಬ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸುಮಾರು 1600 ಕೋಟಿ ರೂಪಾಯಿ ವೆಚ್ಚದಲ್ಲಿ 43 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿರುವ ಈ ಕ್ಯಾಂಪಸ್‌ ಅಮೆರಿಕವನ್ನು ಹೊರತುಪಡಿಸಿ ಬೇರೆ ದೇಶದಲ್ಲಿ ನಿರ್ಮಾಣವಾದ ಬೋಯಿಂಗ್‌ ಎಂಜಿನಿಯರಿಂಗ್‌ ಮತ್ತು ಟೆಕ್ನಾಲಜಿ ಸೆಂಟರ್‌ ಅತಿ ದೊಡ್ಡ ಕ್ಯಾಂಪಸ್‌ ಆಗಿದೆ.

‘ಬೆಂಗಳೂರು ಆವಿಷ್ಕಾರದಿಂದ ನಿರೀಕ್ಷೆಗಳನ್ನು ಸಂಪರ್ಕಿಸುವ ನಗರವಾಗಿದೆ ಹಾಗೂ ಭಾರತದ ತಾಂತ್ರಿಕ ಸಾಮರ್ಥ್ಯಗಳನ್ನು ಜಾಗತಿಕ ಪೂರೈಕೆಗಳಿಗೆ ಸಂಪರ್ಕಿಸುತ್ತದೆ. ಬೋಯಿಂಗ್‌ನ ಈ ಹೊಸ ಕ್ಯಾಂಪಸ್ ಬೆಂಗಳೂರಿನ ಗುರುತನ್ನು ಮತ್ತಷ್ಟು ಬಲಪಡಿಸುತ್ತದೆ. ಇದು ಅಮೆರಿಕದ ಹೊರಗೆ ಬೋಯಿಂಗ್‌ನ ಅತಿದೊಡ್ಡ ಕೇಂದ್ರವಾಗಿದೆ. ಈ ಕ್ಯಾಂಪಸ್ ಭಾರತದ ಪ್ರತಿಭೆಯ ಮೇಲಿನ ವಿಶ್ವ ನಂಬಿಕೆಯನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ಹೇಳಿದರು.
ಬೋಯಿಂಗ್‌ನ ಟೆಕ್ ಸೆಂಟರ್ (ಬಿಐಇಟಿಸಿ)) ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿಸನಿಹ ಭವಿಷ್ಯದಲ್ಲಿ ಭಾರತವೇ ಈ ಕೇಂದ್ರದಲ್ಲಿ ಭವಿಷ್ಯದ ವಿಮಾನಗಳನ್ನು ವಿನ್ಯಾಸಗೊಳಿಸಲಿದೆ. ಫೈಟರ್ ಪೈಲಟ್‌ಗಳಾಗಲಿ ಅಥವಾ ನಾಗರಿಕ ವಿಮಾನಯಾನವಾಗಲಿ ಇಂದು ಭಾರತ ಮಹಿಳಾ ಪೈಲಟ್‌ಗಳ ವಿಷಯದಲ್ಲಿ ಮುಂಚೂಣಿಯಲ್ಲಿದೆ. ಇಂದು, ಭಾರತದ ಪೈಲಟ್‌ಗಳಲ್ಲಿ ಶೇಕಡಾ 15ರಷ್ಟು ಮಹಿಳಾ ಪೈಲಟ್‌ಗಳು, ಇದು ಜಾಗತಿಕ ಸರಾಸರಿಗಿಂತ ಮೂರು ಪಟ್ಟು ಹೆಚ್ಚು ಎಂದು ಅವರು ಹೇಳಿದ್ದಾರೆ.

ಅವರು, ‘ಕಳೆದ 10 ವರ್ಷಗಳಲ್ಲಿ ಭಾರತದ ವಿಮಾನಯಾನ ಮಾರುಕಟ್ಟೆ ಸಂಪೂರ್ಣ ಬದಲಾಗಿದೆ. ಇಂದು ಪ್ರತಿಯೊಬ್ಬ ವಾಯುಯಾನ ಪಾಲುದಾರರು ಹೊಸ ಶಕ್ತಿಯಿಂದ ತುಂಬಿದ್ದಾರೆ. ಭಾರತ ಇಂದು ವಿಶ್ವದ ಮೂರನೇ ಅತಿದೊಡ್ಡ ದೇಶೀಯ ವಿಮಾನಯಾನ ಮಾರುಕಟ್ಟೆಯಾಗಿದೆ. ಮುಂದಿನ ದಿನಗಳಲ್ಲಿ ದೇಶೀಯ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಲಿದೆ. ಇತರ ಬೋಯಿಂಗ್ ಮತ್ತು ಅಂತಾರಾಷ್ಟ್ರೀಯ ಕಂಪನಿಗಳು ಭಾರತದೊಂದಿಗೆ ಬೆಳೆಯಲು ಸುಸಮಯ ಎಂದರು.
ಕಾರ್ಯಕ್ರಮಲದಲ್ಲಿ ರಾಜ್ಯಪಾಲರಾದ ಥಾವರ್‌ ಚಂದ ಗೆಹ್ಲೋಟ್‌, ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಪಕ್ಷನಾಯಕ ಸಿದ್ದರಾಮಯ್ಯ, ಬೋಯಿಂಗ್‌ ಕಂಪನಿ ಪ್ರತಿನಿಧಿಗಳು ಇದ್ದರು.

ಪ್ರಮುಖ ಸುದ್ದಿ :-   ಇನ್ಮುಂದೆ ಸ್ವಾಧೀನಾನುಭವ ಪ್ರಮಾಣಪತ್ರ ಪಡೆದರೆ ಮಾತ್ರ ಕಟ್ಟಡಗಳಿಗೆ ವಿದ್ಯುತ್‌, ನೀರಿನ ಸಂಪರ್ಕ; ಬಿಬಿಎಂಪಿ

ಕ್ಯಾಂಪಸ್‌ ಬಗ್ಗೆ…
ದೇವನಹಳ್ಳಿಯಲ್ಲಿರುವ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್‌ನಲ್ಲಿ ನಿರ್ಮಿಸಲಾಗಿರುವ ಈ ಕ್ಯಾಂಪಸ್, ಸ್ಟಾರ್ಟ್‌ಅಪ್‌ಗಳು ಮತ್ತು ಭಾರತದಲ್ಲಿನ ಖಾಸಗಿ ಮತ್ತು ಸರ್ಕಾರಿ ಪರಿಸರ ವ್ಯವಸ್ಥೆಗಳ ಸಹಯೋಗಕ್ಕೆ ಪ್ರಮುಖ ಕೇಂದ್ರವಾಗಿ ಪರಿಣಮಿಸಲಿದೆ. ಹಾಗೂ ಜಾಗತಿಕ ಏರೋಸ್ಪೇಸ್ ಮತ್ತು ರಕ್ಷಣಾ ಉದ್ಯಮಕ್ಕಾಗಿ ಮುಂದಿನ ಪೀಳಿಗೆಯ ಉತ್ಪನ್ನಗಳು ಮತ್ತು ಸೇವೆಗಳ ಅಭಿವೃದ್ಧಿಗೆ ಈ ಹಬ್ ಗಣನೀಯ ಕೊಡುಗೆ ನೀಡಲಿದೆ ಎಂದು ನಿರೀಕ್ಷಿಸಲಾಗಿದೆ.
ಈ ಸಂಸ್ಥೆ ಭಾರತೀಯ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಲಿದ್ದು, ವಿಜ್ಞಾನ, ತಂತ್ರಜ್ಞಾನ, ಇಂಜಿನಿಯರಿಂಗ್ ಮತ್ತು ಗಣಿತ ಕ್ಷೇತ್ರಗಳ ಪ್ರತಿಭೆಗಳಿಗೆ ಅವಕಾಶಗಳನ್ನು ಒದಗಿಸಲಿದೆ. ಬಿಐಇಟಿಸಿ ಭಾರತದ ಈ ಕ್ಯಾಂಪಸ್‌ ಅಮೆರಿಕದಿಂದ ಹೊರಗೆ ಬೋಯಿಂಗ್‌ ಸಂಸ್ಥೆಯ ಅತಿದೊಡ್ಡ ಅತಿದೊಡ್ಡ ವಿಭಾಗವಾಗಿದೆ. ದೇಶದ ಸ್ಟಾರ್ಟಪ್‌ಗಳು, ಖಾಸಗಿ ವಲಯ ಮತ್ತು ಸರ್ಕಾರದೊಡನೆ ಈ ಬಿಐಇಟಿಸಿ ಕೇಂದ್ರ ಕಾರ್ಯಾಚರಿಸಲಿದೆ.

ಜಾಗತಿಕ ಏರೋಸ್ಪೇಸ್ ಮತ್ತು ರಕ್ಷಣಾ ಉದ್ಯಮಕ್ಕೆ ನೂತನ ಉತ್ಪನ್ನಗಳು ಮತ್ತು ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಈ ಕೇಂದ್ರ ಗಮನ ಹರಿಸಲಿದೆ.
ಬಿಐಇಟಿಸಿ ಕೇಂದ್ರದಿಂದ ಜಾಗತಿಕವಾಗಿ ಏರೋಸ್ಪೇಸ್ ಉದ್ಯಮದ ಪ್ರಗತಿಗಾಗಿ ಕಾರ್ಯಾಚರಿಸಲು ಇನ್ನಷ್ಟು ಸಹಕಾರಿಯಾಗಲಿದೆ ಎಂದು ನಿರೀಕ್ಷಿಸಲಾಗಿದ್ದು, ಬಿಐಇಟಿಸಿ 3,000ಕ್ಕೂ ಹೆಚ್ಚು ಇಂಜಿನಿಯರ್‌ಗಳ ನೇಮಕಾತಿ ಮಾಡಿಕೊಳ್ಳುವ ಗುರಿ ಇಟ್ಟುಕೊಂಡಿದೆ. ಇಂಜಿನಿಯರ್‌ಗಳು ಸಂಶೋಧನೆ ಮತ್ತು ಅಭಿವೃದ್ಧಿ, ಆಧುನಿಕ ತಂತ್ರಜ್ಞಾನಗಳಾದ ಕೃತಕ ಬುದ್ಧಿಮತ್ತೆ (ಎಐ), ಮೆಷಿನ್ ಲರ್ನಿಂಗ್, ಇಂಡಸ್ಟ್ರಿಯಲ್ ಇಂಟರ್ನೆಟ್ ಆಫ್ ಥಿಂಗ್ಸ್, ಕ್ಲೌಡ್ ಕಂಪ್ಯೂಟಿಂಗ್,ಸೇರಿದಂತೆ ಹಲವಾರು ತಂತ್ರಜ್ಞಾನಗಳನ್ನು ಬಳಸಿಕೊಳ್ಳಲಿದ್ದಾರೆ.

ಪ್ರಮುಖ ಸುದ್ದಿ :-   ಸುಹಾಸ ಶೆಟ್ಟಿ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ

ಇದೇ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರು ‘ಬೋಯಿಂಗ್ ಸುಕನ್ಯಾ ಕಾರ್ಯಕ್ರಮ’ಕ್ಕೂ ಚಾಲನೆ ನೀಡಿದ್ದಾರೆ. “ದೇಶದ ಬೆಳೆಯುತ್ತಿರುವ ವಾಯುಯಾನ ಕ್ಷೇತ್ರಕ್ಕೆ ಭಾರತದಾದ್ಯಂತ ಹೆಚ್ಚಿನ ಹೆಣ್ಣು ಮಕ್ಕಳು ಸೇರುವಂತೆ ಮಾಡುವ ಗುರಿ ಹೊಂದಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
“ಹೆಣ್ಣುಮಕ್ಕಳು ಮತ್ತು ಮಹಿಳೆಯರಿಗೆ ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ (STEM) ಕ್ಷೇತ್ರಗಳಲ್ಲಿ ನಿರ್ಣಾಯಕ ಕೌಶಲ್ಯಗಳನ್ನು ಕಲಿಯಲು ಮತ್ತು ವಾಯುಯಾನ ವಲಯದಲ್ಲಿ ಉದ್ಯೋಗಗಳಿಗೆ ತರಬೇತಿ ನೀಡಲು ಬೋಯಿಂಗ್ ಸುಕನ್ಯಾ ಕಾರ್ಯಕ್ರಮ’ ಅವಕಾಶ ಒದಗಿಸುತ್ತದೆ” ಎಂದು ವರದಿಗಳು ತಿಳಿಸಿವೆ.
ಈ ಕಾರ್ಯಕ್ರಮದಡಿ ಹೆಣ್ಣು ಮಕ್ಕಳಿಗೆ ಪ್ರಮುಖ ವಿಜ್ಞಾನ, ತಂತ್ರಜ್ಞಾನ, ಇಂಜಿನಿಯರಿಂಗ್ ಮತ್ತು ಗಣಿತ ಕೌಶಲಗಳನ್ನು ಕಲಿಯಲು ಅವಕಾಶ ಕಲ್ಪಿಸಲಿದೆ ಹಾಗೂ ವೈಮಾನಿಕ ಉದ್ಯೋಗಗಳಿಗೆ ಸಿದ್ಧಗೊಳಿಸಲಿದೆ. ಬಾಲಕಿಯರಿಗಾಗಿ ಬೋಯಿಂಗ್ ಸುಕನ್ಯಾ ಯೋಜನೆ 150 ಸ್ಥಳಗಳಲ್ಲಿ ಕೌಶಲ್ಯ ತರಬೇತಿ ಪ್ರಯೋಗಾಲಯಗಳನ್ನು ತೆರೆಯಲಿದೆ
ಈ ಯೋಜನೆಯಡಿ ಪೈಲಟ್ ಆಗಲು ತರಬೇತಿ ಪಡೆಯುತ್ತಿರುವ ಬಾಲಕಿಯರಿಗೂ ವಿದ್ಯಾರ್ಥಿ ವೇತನ ಸಿಗಲಿದೆ.

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement