ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಆಗಸ್ಟ್‌ 16ರ ವರೆಗೆ ಭಾರಿ ಗಾಳಿಮಳೆ ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 16ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ, ಉತ್ತರ ಒಳನಾಡು, ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆಯನ್ನು ಘೋಷಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿಯೂ ಸಹ ಈ ಅವಧಿಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್‌ ೧೩ರ ವರೆಗೆ ಹಗುರದಿಂದ ಸಾದಾರಣ ಮಳೆಯಾಗಲಿದೆ. ಆದರೆ ಆಗಸ್ಟ್‌ 14ರಿಂದ 16ರ ವರೆಗೆ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ ಗುಡುಗು-ಮಿಂಚಿನೊಂದಿಗೆ ಧಾರಾಕಾರ ಮಳೆಯಾಗುವ ಸಂಭವವಿದ್ದು, ಮೀನುಗಾರರಿಗೆ ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಗಾಳಿಯು ಗಂಟೆಗೆ 40-50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಸೂಚನೆ ನೀಡಲಾಗಿದೆ.

ಉತ್ತರ ಒಳನಾಡಿನಲ್ಲಿ ಭಾರಿ ಮಳೆ:
ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಬೀದರ, ಕಲಬುರಗಿ, ರಾಯಚೂರು, ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಆಗಸ್ಟ್‌ 14ರಿಂದ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಜೋರಾಗಿ ಮಳೆಯಾಗುವ ಸಂಭವವಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಎಚ್ಚರಿಕೆ:
ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಆಗಸ್ಟ್‌ 14ರಿಂದ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಕೆಲವೆಡೆ ತೀವ್ರ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ಬೆಂಗಳೂರಿನಲ್ಲಿ ಭಾರಿ ಮಳೆ:
ಬೆಂಗಳೂರಿನಲ್ಲಿ ಆಗಸ್ಟ್ 16 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ನಗರದ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವಿಕೆಯಿಂದ ಟ್ರಾಫಿಕ್ ಜಾಮ್ ಮತ್ತು ಇತರ ಸಮಸ್ಯೆಗಳು ಉಂಟಾಗಬಹುದು. ಈಗಾಗಲೇ ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ತೀವ್ರತೆ ಹೆಚ್ಚಾಗುವ ನಿರೀಕ್ಷೆಯಿದೆ.
ಕರಾವಳಿ ಮತ್ತು ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗಾಳಿಯ ವೇಗ ಗಂಟೆಗೆ 40-50 ಕಿಲೋಮೀಟರ್ ಇರಬಹುದು ಎಂದು ತಿಳಿಸಲಾಗಿದೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement