ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ ಶಾಸಕ ಮಾಡಾಳು ವಿರೂಪಾಕ್ಷಪ್ಪ

ಬೆಂಗಳೂರು : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್‌) ಟೆಂಡರ್‌ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣದಲ್ಲಿ ಮೊದಲನೇ ಆರೋ‍ಪಿಯಾಗಿ ಬಂಧನ ಭೀತಿ ಎದುರಿಸುತ್ತಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ ವಿರೂಪಾಕ್ಷಪ್ಪ ಅವರು ಜಾಮೀನು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.
ಕಳೆದ ಐದು ದಿನಗಳಿಂದ ನಾಪತ್ತೆಯಾಗಿರುವ ಮಾಡಾಳು ವಿರೂಪಾಕ್ಷಪ್ಪ ಅಜ್ಞಾತ ಸ್ಥಳದಿಂದಲೇ ತಮ್ಮ ವಕೀಲರಿಂದ ಜಾಮೀನು ಕೋರಿ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ. ನಿರೀಕ್ಷಣಾ ಜಾಮೀನು ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಬೇಕೆಂದು ವಕೀಲರು ಮನವಿ ಮಾಡಿದ್ದಾರೆ. ನ್ಯಾಯಮೂರ್ತಿ ಕೆ.

ನಟರಾಜನ್ ಅವರಿದ್ದ ನ್ಯಾಯಪೀಠವು ಮಂಗಳವಾರ ಅರ್ಜಿ ವಿಚಾರಣೆ ನಡೆಸುವುದಾಗಿ ಹೇಳಿದೆ.
40 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ವಿರೂಪಾಕ್ಷಪ್ಪ ಅವರ ಪುತ್ರ ಹಾಗೂ ಬೆಂಗಳೂರು ಜಲಮಂಡಳಿ ಮುಖ್ಯ ಲೆಕ್ಕಾಧಿಕಾರಿ ಪ್ರಶಾಂತ ಮಾಡಾಳ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ರೆಡ್‌ಹ್ಯಾಂಡ್‌ ಆಗಿ ಹಿಡಿದಿದ್ದರು ಹಾಗೂ ನಂತರ ಬಂಧಿಸಿದ್ದರು. ಪ್ರಶಾಂತ ಬಂಧಿತರಾಗಿದ್ದ ಖಾಸಗಿ ಕಚೇರಿಯಲ್ಲಿ ನಂತರ 1.62 ಕೋಟಿ ರೂ. ಅಕ್ರಮ ಹಣವನ್ನು ವಶಕ್ಕೆ ಪಡೆಯಲಾಗಿತ್ತು. ಅಲ್ಲದೆ, ವಿರೂಪಾಕ್ಷಪ್ಪ ಅವರ ಮನೆಯಲ್ಲಿ 6.10 ಕೋಟಿ ರೂ. ಅಕ್ರಮ ಹಣ ಪತ್ತೆಯಾಗಿತ್ತು. ಅನಂತರ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ನಂತರ ಮಾಡಾಳ ವಿರೂಪಾಕ್ಷಪ್ಪ ಅವರು ನಾಪತ್ತೆಯಾಗಿದ್ದಾರೆ. ಅವರ ಬಂಧನಕ್ಕಾಗಿ ಲೋಕಾಯುಕ್ತ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣಗೆ ನಾವು ಅನುಮತಿ ನೀಡಿಲ್ಲ ; ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಜರ್ಮನಿಗೆ ತೆರಳಿದ್ದಾರೆ : ವಿದೇಶಾಂಗ ಸಚಿವಾಲಯ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement