
ಬೆಳಗಾವಿ : ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಚಾಕು ಇರಿದ ಘಟನೆ ನಗರದ ಸದಾಶಿವನಗರದ ಚೆನ್ನಮ್ಮ ವೃತ್ತದ ಬಳಿ ಶನಿವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ.
ದುಷ್ಕರ್ಮಿಗಳು ಪರಾರಿಯಾಗಿದ್ದು, ಮೂವರು ಗಾಯಾಳುಗಳನ್ನು ಬಿಮ್ಸ್ ಆಸ್ಪತ್ರೆಗೆ ಮತ್ತು ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿ ಭುವನೇಶ್ವರಿ ಮೂರ್ತಿ ಮೆರವಣಿಗೆ ಮಾಡುವಾಗ ಯುವಕರು ನೃತ್ಯ ಮಾಡುತ್ತಿದ್ದರು. ಏಕಾಏಕಿ ನುಗ್ಗಿದ ಕೆಲವರು ಜನಸಂದಣಿಯಲ್ಲೇ ಚಾಕುವಿನಿಂದ ಚುಚ್ಚಿದ್ದಾರೆ. ಯುವಕರು ಬಿದ್ದು ಒದ್ದಾಡುತ್ತಿದ್ದಂತೆಯೇ ಸ್ಥಳದಿಂದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.
ಗಾಯಗೊಂಡವರನ್ನು ಗುರುನಾಥ ವಕ್ಕುಂದ, ಸಚಿನ್ ಕಾಂಬಳೆ, ಲೋಕೇಶ ಬೆಟಗೇರಿ, ಮಹೇಶ ಸುಂಕದ, ವಿನಾಯಕ ನರಟ್ಟಿ, ನಜೀರ್ ಪಠಾಣ ಎಂದು ಗುರುತಿಸಲಾಗಿದೆ. ಚಾಕು ಇರಿತದಿಂದ ತಲೆ, ಹೊಟ್ಟೆ, ಬೆನ್ನು ಸೇರಿ ವಿವಿಧ ಭಾಗಗಳಿಗೆ ಗಾಯಗಳಾಗಿವೆ. ಸ್ಥಳಕ್ಕೆ ಎಪಿಎಂಸಿ ಠಾಣೆ ಪೊಲೀಸರು ತೆರಳಿ ಪರಿಶೀಲಿಸಿದ್ದಾರೆ.



ನಿಮ್ಮ ಕಾಮೆಂಟ್ ಬರೆಯಿರಿ