ಮೂಡಲಗಿ ಹಳ್ಳದಲ್ಲಿ 7 ಭ್ರೂಣಗಳ ಪತ್ತೆ ಪ್ರಕರಣ: ಹೆರಿಗೆ ಆಸ್ಪತ್ರೆ ಸೀಜ್​

ಬೆಳಗಾವಿ: ನಿನ್ನೆ ಜಿಲ್ಲೆಯ ಮೂಡಲಗಿ ಪಟ್ಟಣದ ಹಳ್ಳದಲ್ಲಿ 7 ಭ್ರೂಣಗಳು ಪತ್ತೆಯಾದ ಆಘಾತಕಾರಿ ಪ್ರಕರಣವನ್ನು ಅಧಿಕಾರಿಗಳು ಭೇದಿಸಿದ್ದು, ಭ್ರೂಣಗಳನ್ನು ಎಸೆದಿದ್ದ ಆಸ್ಪತ್ರೆಯನ್ನು ಸೀಜ್​ ಮಾಡಿದ್ದಾರೆ ಎಂದು ವರದಿಯಾಗಿದೆ.
ಪ್ರಕರಣ ಸಂಬಂಧ ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್‌ಒ) ಮಹೇಶ ಕೋಣಿ ನೇತೃತ್ವದ ತಂಡ ಪೊಲೀಸರ ಜೊತೆ ಸೇರಿ ಮೂಡಲಗಿ ವೆಂಕಟೇಶ್ವರ ಹೆರಿಗೆ ಆಸ್ಪತ್ರೆ ಮತ್ತು ಸ್ಕ್ಯಾನಿಂಗ್ ಸೆಂಟರ್ ಹಾಗೂ ನವಜೀವನ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿತ್ತು. ಭ್ರೂಣಗಳನ್ನು ಎಸೆದಿರುವುದು ವೆಂಕಟೇಶ್ವರ ಹೆರಿಗೆ ಆಸ್ಪತ್ರೆ ಮತ್ತು ಸ್ಕ್ಯಾನಿಂಗ್ ಸೆಂಟರ್ ಎಂಬುದು ಬೆಳಕಿಗೆ ಬಂದಿದ್ದು, ಹೀಗಾಗಿ ಸೀಜ್​ ಮಾಡಿದ್ದಾರೆ.

ಆಸ್ಪತ್ರೆಯಲ್ಲಿ ಮೂರು ವರ್ಷಗಳ ಹಿಂದೆಯೇ ಗರ್ಭಪಾತ ಮಾಡಲಾಗಿತ್ತು. ಶುಕ್ರವಾರ ಸಿಕ್ಕಿರುವ ಏಳು ಭ್ರೂಣ ಮೃತದೇಹಗಳು ಮೂರು ವರ್ಷಗಳ ಹಿಂದೆ ಗರ್ಭಪಾತ ಮಾಡಿದ್ದವು ಎಂಬ ವಿಚಾರ ಪ್ರಾಥಮಿಕ ತನಿಖೆ ವೇಳೆ ಬಯಲಾಗಿದೆ. ಅನುಮಾನದ ಮೇರೆಗೆ ಆಸ್ಪತ್ರೆ ಮತ್ತು ಸ್ಕ್ಯಾನಿಂಗ್​ ಸೆಂಟರ್​ ಮೇಲೆ ಪೊಲೀಸರು ದಾಳಿ ನಡೆಸಲು ಸಿದ್ಧತೆ ನಡೆಸಿದ್ದರು. ಪೊಲೀಸರ ದಾಳಿ ಭೀತಿಯಿಂದ ಕಳೆದ ಜೂನ್.23ರಂದು ರಾತ್ರೋರಾತ್ರಿ ಏಳು ಭ್ರೂಣಗಳನ್ನು ಐದು ಬಾಟಲಿಗಳಲ್ಲಿ ಆಸ್ಪತ್ರೆ ಸಿಬ್ಬಂದಿ ಹಳ್ಳಕ್ಕೆ ಎಸೆದಿದ್ದರು. ಪ್ರಾಥಮಿಕ ತನಿಖೆಯಲ್ಲಿ ಆಸ್ಪತ್ರೆ ಸಿಬ್ಬಂದಿ ಎಡವಟ್ಟು ಬಯಲಾಗಿದ್ದು ಈಗಾಗಲೇ ಆಸ್ಪತ್ರೆ ಸೀಜ್ ಮಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ವಿಷಯ ತಿಳಿದ ಆಸ್ಪತ್ರೆ ಸಿಬ್ಬಂದಿ ಜೂನ್​ 23 ರಂದೇ ರಾತ್ರಿ ಐದು ಬಾಕ್ಸ್​ಗಳ ಒಳಗೆ ಏಳು ಭ್ರೂಣಗಳನ್ನು ಹಾಕಿ ಎಸೆದಿದ್ದಾರೆ ಎಂಬುದು ತನಿಖೆಯ ವೇಳೆ ತಿಳಿದು ಬಂದಿದೆ. ಜೂನ್‌ 24ರಂದು ಘಟನೆ ಬೆಳಕಿಗೆ ಬಂದಿದೆ.

ಪ್ರಮುಖ ಸುದ್ದಿ :-   ಇಂದು ಮಂಗಳೂರು ಏರ್​ಪೋರ್ಟ್​ಗೆ ಪ್ರಜ್ವಲ್ ರೇವಣ್ಣ ಆಗಮಿಸುವ ಸಾಧ್ಯತೆ

ಹೆಚ್ಚಿನ ಮಾಹಿತಿ ಕಲೆ ಹಾಕಲು ಪೊಲೀಸರು ವೆಂಕಟೇಶ್ವರ ಹೆರಿಗೆ ಆಸ್ಪತ್ರೆ ಮತ್ತು ಸ್ಕ್ಯಾನಿಂಗ್ ಸೆಂಟರ್ ಅನ್ನು ಸೀಜ್​ ಮಾಡಿ ತನಖೆ ನಡೆಸುತ್ತಿದ್ದಾರೆ. ವೆಂಕಟೇಶ್ವರ ಹೆರಿಗೆ ಆಸ್ಪತ್ರೆಯ ವೈದ್ಯೆ ತಪ್ಪೊಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಿನ್ನೆ ಮೂಡಲಗಿ ಬಸ್ ನಿಲ್ದಾಣದ ಬಳಿಯ ಹಳ್ಳದಲ್ಲಿ 7 ಬಾಕ್ಸ್​ಗಳು ತೇಲಿಬಂದಿದ್ದನ್ನು ದಾರಿಹೋಕರು ಗಮನಿಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಬಾಕ್ಸ್​ಗಳನ್ನು ತೆರೆದು ನೋಡಿದಾಗ ಅದರೊಳಗೆ ಭ್ರೂಣಗಳು ಇರುವುದು ತಿಳಿದು ಬಂದಿದೆ. ಇದನ್ನು ಕಂಡ ಮೂಡಲಗಿ ಜನರು ಬೆಚ್ಚಿ ಬಿದ್ದಿದ್ದರು.ಈ ಭ್ರೂಣಗಳನ್ನು ಬೆಳಗಾವಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ಕಳುಹಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ. ಎಲ್ಲಾ ಭ್ರೂಣಗಳಿಗೆ 5 ತಿಂಗಳಾಗಿದ್ದು, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement