ಜೆಡಿಎಸ್-ಬಿಜೆಪಿ ಮೈತ್ರಿ ನಂತರ ಮೊದಲ ಬಾರಿಗೆ ಪ್ರಧಾನಿ ಮೋದಿ ಭೇಟಿಯಾದ ದೇವೇಗೌಡ-ಕುಮಾರಸ್ವಾಮಿ

ನವದೆಹಲಿ: ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡರು ತಮ್ಮ ಪುತ್ರರಾದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಎಚ್‌.ಡಿ.ರೇವಣ್ಣ ಅವರ ಜೊತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಸತ್‌ ಭವನದ ಪ್ರಧಾನಿಗಳ ಕಾರ್ಯಾಲಯದಲ್ಲಿ ಗುರುವಾರ ಭೇಟಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಮಾಜಿ ಸಂಸದ ಕುಪೇಂದ್ರ ರೆಡ್ಡಿ, ಸಂಸದ ಪ್ರಜ್ವಲ್ ರೇವಣ್ಣ, ಶಾಸಕ ಸಿ.ಎನ್.ಬಾಲಕೃಷ್ಣ ಇದ್ದರು.
ಕರ್ನಾಟಕದ ರಾಜಕೀಯ ಪರಿಸ್ಥಿತಿಯ ಜತೆಗೆ ಕೊಬ್ಬರಿ ಖರೀದಿ, ಕಾಡುಗೊಲ್ಲ ಜಾತಿಗೆ ಮೀಸಲಾತಿ ಸೌಲಭ್ಯ‌ ಹಾಗೂ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಮಾಜಿ ಪ್ರಧಾನಿಗಳು ಮೋದಿ ಅವರ ಜತೆ ಚರ್ಚೆ ನಡೆಸಲಾಯಿತು ಎಂದು ಕುಮಾರಸ್ವಾಮಿ ತಿಳಿಸಿದರು.
ಅಲ್ಲದೆ, ಕೊಬ್ಬರಿಗೆ ಬೆಂಬಲ ಬೆಲೆ ನೀಡಬೇಕು ಹಾಗೂ ನಾಫೆಡ್‌ ಮೂಲಕ ಖರೀದಿ ಮಾಡಬೇಕು ಎಂಬ ಬಗ್ಗೆ ಪ್ರಧಾನಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು ಎಂದು ಕುಮಾರಸ್ವಾಮಿ ತಿಳಿಸಿದರು.

ಸುದ್ದಿಗಾರರ ಜತೆಗೆ ಮಾತನಾಡಿದ ಕುಮಾರಸ್ವಾಮಿ ಅವರು, ಜೆಡಿಎಸ್‌ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ವಿಚಾರದಲ್ಲಿ ಯಾವುದೇ ಸಮಸ್ಯೆ, ಗೊಂದಲ ಇಲ್ಲ. ಯಾವ ಯಾವ ಕ್ಷೇತ್ರದಲ್ಲಿ ಯಾರು ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವುದನ್ನು ನಾವೇ ಪರಸ್ಪರ ಕೂತು ಅಂತಿಮಗೊಳಿಸುತ್ತೇವೆ. ಆ ಬಗ್ಗೆ ಯಾವುದೇ ಸಮಸ್ಯೆ ಇಲ್ಲ. ಒಂದು ಕ್ಷೇತ್ರ ಹೆಚ್ಚೂ ಕಡಿಮೆ ಆಗಬಹುದು ಅಷ್ಟೇ. ಅದರಲ್ಲಿ ಯಾವುದೇ ಸಮಸ್ಯೆ ಆಗುವುದಿಲ್ಲ. ಅದಕ್ಕೆ ಏನೆಲ್ಲಾ ಮಾಡಬೇಕೋ ಅದನ್ನು ಮಾಡುತ್ತೇನೆ. ಜನವರಿ ಅಂತ್ಯದ ಒಳಗೆ ನಾವು ಎಲ್ಲಾ ನಿರ್ಧಾರ ಮಾಡುತ್ತೇವೆ’ ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಪೆನ್‌ ಡ್ರೈವ್ ಪ್ರಕರಣ : 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಲು ಪ್ರಜ್ವಲ್‌ , ಎಚ್‌ಡಿ ರೇವಣ್ಣಗೆ ಎಸ್‌ಐಟಿ ನೋಟಿಸ್‌ ; ವರದಿ

‘ನಿಖಿಲ್ ಕುಮಾರಸ್ವಾಮಿ ಅವರು ಎಲ್ಲಾ 28 ಲೋಕಸಭಾ ಕ್ಷೇತ್ರಗಳಲ್ಲಿಯೂ ಪ್ರಚಾರ ಮಾಡುತ್ತಾರೆ. ಯಾವುದೇ ಕಾರಣಕ್ಕೂ ಅವರು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಆದರೆ, ಜನರು ಚುನಾವಣೆಗೆ ನಿಲ್ಲಿ ಎಂದು ಹೇಳುತ್ತಿದ್ದಾರೆ. ಆದರೆ, ಅವರಿಗೆ ಸ್ಪರ್ಧೆ ಮಾಡುವ ಇಚ್ಛೆ ಇಲ್ಲ’ ಎಂದು ತಿಳಿಸಿದರು.
ನಾವು ಪರಸ್ಪರ ವಿಶ್ವಾಸ, ನಂಬಿಕೆಯಿಂದ ಕೆಲಸ ಮಾಡುತ್ತೇವೆ. ಮೂರನೇ ಅವಧಿಗೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಲು ನಾವೆಲ್ಲಾ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement