ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ದಿನಾಂಕ ನಿಗದಿ: ಅಕ್ಟೋಬರ್‌ 28ರಂದು ಮತದಾನ

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಇದೇ ಅಕ್ಟೋಬರ್ 28ರಂದು ಮತದಾನ ನಡೆಯಲಿದೆ ಹಾಗೂ ಅಕ್ಟೋಬರ್‌ 31ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ಈ ಕುರಿತು ರಾಜ್ಯ ಚುನಾವಣಾ ಆಯೋಗ ಪ್ರಕಟಣೆ ಹೊರಡಿಸಿದ್ದು, ಚುನಾವಣಾ ವೇಳಾಪಟ್ಟಿ ಅನ್ವಯ ಅಕ್ಟೋಬರ್‌ 10ರಂದು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ಅಕ್ಟೋಬರ್‌ 17ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. 18ರಂದು ನಾಮಪತ್ರಗಳನ್ನು ಪರಿಶೀಲಿಸಲಿದ್ದು, ಉಮೇದುವಾರಿಕೆ ಅಥವಾ ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಅಕ್ಟೋಬರ್‌ 20 ಕೊನೆಯ ದಿನವಾಗಿದೆ.
ಮತದಾನ ಅಕ್ಟೋಬರ್ 28ರಂದು ನಡೆಯಲಿದ್ದು, ಅಂದು ಬೆಳಿಗ್ಗೆ 7ರಿಂದ ಸಂಜೆ 5 ಗಂಟೆಗಳ ವರೆಗೆ ಮತದಾನ ನಡೆಯಲಿದೆ. ಅಕ್ಟೋಬರ್‌ 31ರಂದು ಮತ ಎಣಿಕೆ ನಡೆಯಲಿದೆ ಎಂದು ಆಯೋಗ ಮಾಹಿತಿ ನೀಡಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಎಸ್‌ಐಆರ್‌-2026 ಅಂತಿಮ ಪಟ್ಟಿ ಪ್ರಕಟ ; ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು 11,39,623 ಮತದಾರರು

ನಿಮ್ಮ ಕಾಮೆಂಟ್ ಬರೆಯಿರಿ

advertisement