ಕರ್ನಾಟಕದಲ್ಲಿ ಗುರುವಾರ 1,108 ಜನರಿಗೆ ಹೊಸದಾಗಿ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆಯಲ್ಲಿ ಇಂದು (ಗುರುವಾರ) ಸಹ ಒಂದು ಸಾವಿರಕ್ಕೂ ಹೆಚ್ಚು ಹೊಸ ಸೋಂಕುಗಳು ದಾಖಲಾಗಿವೆ.
ಇಂದು 1,108 ಮಂದಿಗೆ ಕೊರೊನಾ ದೃಢಪಟ್ಟಿದ್ದು, 18 ಮಂದಿ ಮೃತಪಟ್ಟಿದ್ದಾರೆ ಹಾಗೂ 809 ಜನ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 16,174ಕ್ಕೆ ಏರಿಕೆಯಾಗಿದೆ. ಪಾಸಿಟಿವಿಟಿ ರೇಟ್ 0.66% ಗೆ ಇಳಿಕೆಯಾಗಿದೆ.
ಬೆಂಗಳೂರಿನಲ್ಲಿ ಕೂಡ ಪ್ರಕರಣ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 308 ಕೇಸ್ ದಾಖಲಾಗಿದ್ದು, 5 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 203 ಜನ ಇಂದು ಡಿಸ್ಚಾರ್ಜ್ ಆಗಿದ್ದಾರೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 1, ಬಳ್ಳಾರಿ 7, ಬೆಳಗಾವಿ 38, ಬೆಂಗಳೂರು ಗ್ರಾಮಾಂತರ 14, ಬೆಂಗಳೂರು ನಗರ 308, ಬೀದರ್ 3, ಚಾಮರಾಜನಗರ 7, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 63, ಚಿತ್ರದುರ್ಗ 9, ದಕ್ಷಿಣ ಕನ್ನಡ 186, ದಾವಣಗೆರೆ 9, ಧಾರವಾಡ 6, ಗದಗ 3, ಹಾಸನ 64, ಹಾವೇರಿ 0, ಕಲಬುರಗಿ 6, ಕೊಡಗು 9, ಕೋಲಾರ 19, ಕೊಪ್ಪಳ 2, ಮಂಡ್ಯ 26, ಮೈಸೂರು 87, ರಾಯಚೂರು 0, ರಾಮನಗರ 8, ಶಿವಮೊಗ್ಗ 44, ತುಮಕೂರು 24, ಉಡುಪಿ 113, ಉತ್ತರ ಕನ್ನಡ 45, ವಿಜಯಪುರ 3 ಮತ್ತು ಯಾದಗಿರಿಯಲ್ಲಿ 0 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ ವೇಳೆ ಬಿಜೆಪಿಗೆ ಶಾಕ್ : ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿ ಸದಸ್ಯ ಕೆ.ಪಿ.ನಂಜುಂಡಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement