ಬೆಂಗಳೂರು: ಕೆಆರ್ಎಸ್ ಅಣೆಕಟ್ಟೆ ಹಾಗೂ ಅಕ್ರಮ ಗಣಿಗಾರಿಕೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಸಂಸದೆ ಸುಮಲತಾ ಪರಸ್ಪರರು ಟೀಕಾಪ್ರಹಾರ ನಡೆಸುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಲು ಮಾಜಿ ಪ್ರಧಾನಿ ಎಚ್ಡಿ.ದೇವೇಗೌಡ ಅವರು ನಿರಾಕರಿಸಿದ್ದಾರೆ.
ಇದು ರಾಜ್ಯ ರಾಜಕೀಯ ವಲಯದಲ್ಲಿ ವಾದ-ಪ್ರತಿವಾದಕ್ಕೆ ಕಾರಣವಾಗಿದೆ. ಆದರೆ, ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ನನಗೆ ವಿಷಯ ಗೊತ್ತಿದೆ. ನಾನು ಇದರಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಅಕ್ರಮ ಗಣಿಗಾರಿಕೆಯಿಂದಲೇ ಕೆಆರ್ಎಸ್ ಬಿರುಕು ಬಿಡಲು ಕಾರಣ ಎಂಬ ಸುಮಲತಾರ ಆರೋಪ ಎಂಬುದಕ್ಕೆ ಪ್ರತಿಕ್ರಿಯಿಸಿದ ಅವರು, ವಿಷಯ ಗೊತ್ತಿದೆ, ಆದರೆ ಈ ಬಗ್ಗೆ ಚರ್ಚೆ ಬೇಡ ಎಂದು ಹೇಳಿದ್ದಾರೆ.
ಜೆಡಿಎಸ್ನಲ್ಲಿ ಭವಿಷ್ಯವಿದ್ದರೆ ಅದು ಪ್ರಜ್ವಲ್ ರೇವಣ್ಣ ಅವರಿಗೆ ಮಾತ್ರ ಎಂದು ಹೇಳಲು ಸುಮಲತಾ ಅವರೇನು ಜ್ಯೋತಿಷಿಯೇ ಎಂದು ಪ್ರಶ್ನಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ