ಹಾಸಿಗೆಯಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ 5 ವರ್ಷದ ಮಗುವಿನ ಗುಪ್ತಾಂಗ ಸುಟ್ಟ ಮಲತಾಯಿ

ಪಾಲಕ್ಕಾಡ್ (ಕೇರಳ): ಹಾಸಿಗೆಯಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾಳೆಂದು ಐದು ವರ್ಷದ ಹೆಣ್ಣು ಮಗುವಿನ ಗುಪ್ತಾಂಗಕ್ಕೆ ಬಿಸಿ ಸೌಟಿನಿಂದ ಸುಟ್ಟು ಚಿತ್ರಹಿಂಸೆ ನೀಡಿದ ಭೀಕರ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ಕಂಜಿಕೋಡ್ ಬಳಿ ನಡೆದಿದೆ ಎಂದು ವರದಿಯಾಗಿದೆ.
ಕಳೆದ ವಾರ ಈ ಅಮಾನವೀಯ ಕೃತ್ಯ ನಡೆದಿದ್ದು, ಮಗು ಅಂಗನವಾಡಿಗೆ ಹೋದಾಗ ಶಿಕ್ಷಕಿಯ ಜಾಗರೂಕತೆಯಿಂದ ವಿಷಯ ಬೆಳಕಿಗೆ ಬಂದಿದೆ. ಮಗು ತರಗತಿಯಲ್ಲಿ ಕುಳಿತುಕೊಳ್ಳಲು ಕಷ್ಟಪಡುತ್ತಿರುವುದನ್ನು ಗಮನಿಸಿದ ಶಿಕ್ಷಕಿ, ವಿಚಾರಿಸಿದಾಗ ಸಾಕುತಾಯಿಯ ಕ್ರೌರ್ಯ ಬಯಲಾಗಿದೆ. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಗುವಿನ ಸಾಕುತಾಯಿಯನ್ನು (ಬಿಹಾರ ಮೂಲದವರು) ಗುರುವಾರ ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯವು ಆರೋಪಿ ಮಹಿಳೆಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಮತ್ತು ಬಾಲಾಪರಾಧ ನ್ಯಾಯ ಕಾಯ್ದೆ (Juvenile Justice Act) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಗುವಿನ ತಂದೆ ನೇಪಾಳ ಮೂಲದವರಾಗಿದ್ದು, ಸ್ಥಳೀಯ ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಸದ್ಯ ಗಾಯಗೊಂಡ ಮಗುವನ್ನು ಮಕ್ಕಳ ಕಲ್ಯಾಣ ಸಮಿತಿ (CWC) ವಶಕ್ಕೆ ನೀಡಲಾಗಿದ್ದು, ಮಗು ಸಮಿತಿಯ ಆರೈಕೆಯಲ್ಲಿದೆ.

ಪ್ರಮುಖ ಸುದ್ದಿ :-   ಬಂಗಾಳ ರಾಜಕೀಯದಲ್ಲಿ ಸುನಾಮಿ ; ದೀದಿಗೆ ಬಿಗ್ ಶಾಕ್ : ಟಿಂಎಂಸಿ ಶಾಸಕರ ಬೆಂಬಲದಿಂದಲೇ ವಿಧಾನಸಭೆ ವಿಪಕ್ಷದ ನಾಯಕನಾದ ಉಚ್ಚಾಟಿತ ಶಾಸಕ..!

4.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement