ಸುಮಲತಾ ಅಂಬರೀಶ ಬಿಜೆಪಿ ಸೇರ್ಪಡೆಗೆ ದಿನಾಂಕ ಫಿಕ್ಸ್

ಬೆಂಗಳೂರು : ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿದ್ದ ನಟಿ ಸುಮಲತಾ ಅಂಬರೀಶ ಈ ಬಾರಿ ಬಿಜೆಪಿ ಬೆಂಬಲಿಸಲು ನಿರ್ಧರಿಸಿ ಕಣದಿಂದ ಹಿಂದೆ ಸರಿದಿದ್ದಾರೆ. ಬುಧವಾರ (ಏಪ್ರಿಲ್‌ 3)ರಂದು ಕಣದಿಂದ ಹಿಂದೆ ಸರಿಯುವುದಾಗಿ ಹಾಗೂ ಬಿಜೆಪಿ ಬೆಂಬಲಿಸುವುದಾಗಿ ಘೋಷಿಸಿದ್ದರು. ಈಗ ಬಿಜೆಪಿ ಸೇರುವ ದಿನಾಂಕ ಘೋಷಣೆ ಮಾಡಿದ್ದು, ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಅವರು ತಾನು ಶುಕ್ರವಾರ ಏಪ್ರಿಲ್‌ 5ರಂದು ಬಿಜೆಪಿಗೆ ಸೇರ್ಪಡೆಯಾಗುವುದಾಗಿ ಪ್ರಕಟಿಸಿದ್ದಾರೆ. ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಇ ಘಟಾನುಘಟಿ ನಾಯಕರು ಪಾಲ್ಗೊಳ್ಳಲಿದ್ದಾರೆ.

ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿಸಿ ಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವುದಾಗಿ ಅವರು ತಿಳಿಸಿದ್ದಾರೆ. ಬಿಜೆಪಿ ನಾಯಕರ ಸಮ್ಮುಖದಲ್ಲಿ ಏಪ್ರಿಲ್ 5ರ ಶುಕ್ರವಾರ ಬೆಳಿಗ್ಗೆ 11:30ಕ್ಕೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವೆ ಎಂದು ಹೇಳಿದ್ದಾರೆ.
ಮಂಡ್ಯದ ನನ್ನ ಸ್ವಾಭಿಮಾನಿ ಬಂಧುಗಳ, ಡಾ.ಅಂಬರೀಶ ಅವರ ಅಭಿಮಾನಿಗಳ ಹಾಗೂ ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದ ಎಂದಿನಂತೆ ಇರಲಿ ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

ಪ್ರಮುಖ ಸುದ್ದಿ :-   ರಾಜ್ಯದ ವಿಧಾನ ಪರಿಷತ್ತಿನ 6 ಸ್ಥಾನಗಳಿಗೆ ಚುನಾವಣೆ ಘೋಷಣೆ

ಸುಮಲತಾ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. ನಂತರ ಬಿಜೆಪಿಗೆ ಬೆಂಬಲಿಸಿದ್ದ ಅವರು ಈ ಬಾರಿ ಮತ್ತೆ ಮಂಡ್ಯದಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದರು. ಮಂಡ್ಯ ಟಿಕೆಟ್​ಗಾಗಿ ಭಾರೀ ಪ್ರಯತ್ನ ನಡೆಸಿದ್ದರು. ಆದರೆ ಬದಲಾದ ಸನ್ನಿವೇಶದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಅಂತಿಮವಾಗಿ​ ಮಂಡ್ಯ ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟಿದೆ. ಬಳಿಕ ಸುಮಲತಾ ಅವರು ತಮ್ಮ ಬೆಂಬಲಿಗರ ಅಭಿಪ್ರಾಯ ಪಡೆದು ಈ ಬಾರಿ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಘೋಷಣೆ ಮಾಡಿದ್ದರು. ಹಾಗೂ ಬಿಜೆಪಿ ಸೇರುವುದಾಗಿ ಪ್ರಕಟಿಸಿದ್ದರು. ಅದರಂತೆ ಶುಕ್ರವಾರ (ಏಪ್ರಿಲ್‌ 5) ಅಧಿಕೃತವಾಗಿ ಸುಮಲತಾ ಬಿಜೆಪಿಗೆ ಸೇರಲಿದ್ದಾರೆ.

ಪ್ರಮುಖ ಸುದ್ದಿ :-   ಪ್ರಧಾನಿ ಬಗ್ಗೆ ವಿವಾದಾತ್ಮಕ ಹೇಳಿಕೆ, ವಿದ್ಯುತ್‌ ಕಡಿತ ಬೆದರಿಕೆ: ಶಾಸಕ ರಾಜು ಕಾಗೆಗೆ ಚುನಾವಣೆ ಆಯೋಗದಿಂದ ನೋಟಿಸ್‌

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement