ಸಚಿವರ ಪುತ್ರನಿಗೆ ಬ್ಲ್ಯಾಕ್ ಮೇಲ್ ಆರೋಪ: ವ್ಯಕ್ತಿ ಬಂಧನ

ಬೆಂಗಳೂರು: ಸಚಿವ ಎಸ್.ಟಿ ಸೋಮಶೇಖರ್ ಪುತ್ರ ನಿಶಾಂತ್ ಅವರಿಗೆ ನಕಲಿ ಅಶ್ಲೀಲ ವೀಡಿಯೋ ಬಿಡುಗಡೆಗೊಳಿಸುವುದಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಸಚಿವ ಎಸ್.ಟಿ. ಸೋಮಶೇಖರ್ ಪುತ್ರ ನಿಶಾಂತ್ ಮಹಿಳೆಯೊಂದಿಗಿರುವ ವಿಡಿಯೊವನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುವುದಾಗಿ ಬೆದರಿಕೆಯೊಡ್ಡಿದ್ದ ಪ್ರಕರಣದಲ್ಲಿ  ಖ್ಯಾತ ಜ್ಯೋತಿಷಿಯ ಪುತ್ರ ರಾಹುಲ್ ಭಟ್ (22) ಎಂಬಾತನನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಅಲ್ಲದೆ ಕೋರ್ಟ್ ಮುಂದೆ ಹಾಜರುಪಡಿಸಿ, ಹೆಚ್ಚಿನ ತನಿಖೆಗಾಗಿ 5 ದಿನಗಳ ಕಾಲ ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಸೋಮಶೇಖರ್‌ ಅವರ ಮಾಜಿ ಗನ್‌ಮ್ಯಾನ್‌, ಹಾಗೂ ಮತ್ತೊಬ್ಬರನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ.
ಈ ಪ್ರಕರಣ ಹಿಂದೆ ಕಾಂಗ್ರೆಸ್ ಶಾಸಕರ ಪುತ್ರಿಯ ಹೆಸರು ಪ್ರಸ್ತಾಪವಾಗುತ್ತಿದ್ದು, ಇನ್ನೂ ನಾಲ್ಕು ಮಂದಿ ಇದ್ದಾರೆ ಎಂದು ಹೇಳಲಾಗುತ್ತಿದೆ. ಶಾಸಕರ ಪುತ್ರಿ ವಿದ್ಯಾಭ್ಯಾಸಕ್ಕಾಗಿ ಲಂಡನ್‍ಗೆ ಹೋಗಿದ್ದು, ಬ್ರಿಟನ್‌ ಮೂಲದ ಇಂಟರ್ನೆಟ್ ನಂಬರ್ ಬಳಸಿ ವಿಡಿಯೋ ಕಳುಹಿಸಲಾಗಿದೆ ಎನ್ನಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement