ಪ್ರಧಾನಿ ಮೋದಿಗೇನು ರಾವಣನಂತೆ 100 ತಲೆಗಳಿವೆಯೇ: ಮಲ್ಲಿಕಾರ್ಜುನ ಖರ್ಗೆ ಲೇವಡಿ, ಗುಜರಾತ್‌ ಮಗನಿಗೆ ಅವಮಾನ ಎಂದ ಬಿಜೆಪಿ

ಅಹಮದಾಬಾದ್‌: ಗುಜರಾತ್ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾವಣ ಎಂದು ಕರೆದಿರುವುದು ರಾಜಕೀಯ ವಾಗ್ಯುದ್ಧಕ್ಕೆ ಕಾರಣವಾಗಿದೆ. ಖರ್ಗೆ ಅವರು ಗುಜರಾತಿನ ಮಗನನ್ನು ಅವಮಾನಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಗುಜರಾತ್ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಹಮದಾಬಾದ್‌ನಲ್ಲಿ ನಡೆದ ಕಾಂಗ್ರೆಸ್‌ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮೋದಿ ಜೀ ಅವರು ಪ್ರಧಾನಿಯಾಗಿದ್ದಾರೆ, ಆದರೆ ಅವರು ತಮ್ಮ ಕೆಲಸವನ್ನು ಮರೆತು ಮಹಾನಗರಪಾಲಿಕೆ, ಶಾಸಕರ ಚುನಾವಣೆಗಳಲ್ಲಿ ಪ್ರಚಾರದಲ್ಲಿ ತೊಡಗಿದ್ದಾರೆ. ಅವರು ಎಲ್ಲ ಸಮಯದಲ್ಲೂ ತಮ್ಮ ಬಗ್ಗೆಯೇ ಮಾತನಾಡುತ್ತಾರೆ. ಮೋದಿ ಅವರೇ ನಾವು ಎಷ್ಟು ಬಾರಿ ನಿಮ್ಮ ಮುಖವನ್ನು ನೋಡಿವುದು..? ನಿಮಗೆ ಎಷ್ಟು ರೂಪಗಳಿವೆ? ನಿಮಗೆ ರಾವಣನಂತೆ 100 ತಲೆಗಳಿವೆಯೇ? ಎಂದು ಲೇವಡಿ ಮಾಡಿದ್ದಾರೆ.

ಬಿಜೆಪಿ ಪ್ರತಿ ಚುನಾವಣೆಯಲ್ಲೂ ಆಯಾ ಚುನಾವಣಾ ಅಭ್ಯರ್ಥಿಗಳ ಹೆಸರಿನಲ್ಲೇ ಮತ ಕೇಳುವುದನ್ನು ಬಿಟ್ಟು ಪ್ರಧಾನಿ ಮೋದಿ ಹೆಸರಿನಲ್ಲೇ ಮತ ಕೇಳುತ್ತಿದೆ. ಮೋದಿ ಅವರು ಪುರಸಭೆಗೆ ಬಂದು ಕೆಲಸ ಮಾಡುತ್ತಾರೆಯೇ? ಕಷ್ಟದ ಸಮಯದಲ್ಲಿ ನಿಮಗೆ ಸಹಾಯ ಮಾಡುತ್ತಾರೆಯೇ? ಎಂದು ಖರ್ಗೆ ಮತದಾರರನ್ನು ಪ್ರಶ್ನಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರನ್ನ ರಾವಣ ಎಂದು ಕರೆದಿರುವುದಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಕಾಂಗ್ರೆಸ್ ಗುಜರಾತನ್ನು ಹಾಗೂ ಗುಜರಾತದ ಪುತ್ರನನ್ನು ಅವಮಾನಿಸುತ್ತಿದೆ ಎಂದು ಕಿಡಿ ಕಾರಿದೆ.

ಪ್ರಮುಖ ಸುದ್ದಿ :-   ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ : ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆಪ್ತ ಸಹಾಯಕನ ಬಂಧನ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ರಾವಣ ಎಂದು ವಾಗ್ದಾಳಿ ನಡೆಸಿದ ನಂತರ ಕಾಂಗ್ರೆಸ್ ಪ್ರತಿ ಗುಜರಾತಿಯನ್ನು “ಅವಮಾನಿಸಿದೆ” ಎಂದು ಬಿಜೆಪಿ ಮಂಗಳವಾರ ಆರೋಪಿಸಿದೆ ಮತ್ತು ಜನರು ತಮ್ಮ ಮತಗಳ ಮೂಲಕ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಬೇಕೆಂದು ಕರೆ ನೀಡಿದ್ದಾರೆ.
ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಅವರು ಗುಜರಾತ್‌ನ ಮತದಾರರು ಗುಜರಾತಿನ ಮಗನಿಗೆ 100 ಪ್ರತಿಶತ ಮತ ಚಲಾಯಿಸಿ” ಎಂದು ಕೇಳಿಕೊಂಡರು.
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪಾತ್ರಾ, ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಸೋನಿಯಾ ಮತ್ತು ರಾಹುಲ್ ಗಾಂಧಿ ಅವರ ಅಭಿಪ್ರಾಯಗಳನ್ನು ಖರ್ಗೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಆರೋಪಿಸಿದರು. 2007 ರ ಗುಜರಾತ್ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಸೋನಿಯಾ ಗಾಂಧಿಯವರ “ಮೌತ್ ಕಾ ಸೌದಾಗರ್” (ಸಾವಿನ ವ್ಯಾಪಾರಿ) ಹೇಳಿಕೆಯಿಂದ ಮೋದಿಯವರ ಮೇಲೆ ವೈಯಕ್ತಿಕ ದಾಳಿ ಪ್ರಾರಂಭವಾಯಿತು ಎಂದು ಅವರು ಹೇಳಿದರು.
ಖರ್ಗೆಯವರು ಹೇಳಿರುವುದು ಖಂಡನೀಯ ಮತ್ತು ಇದು ಕಾಂಗ್ರೆಸ್‌ನ ಮನಸ್ಥಿತಿಯನ್ನು ತೋರಿಸುತ್ತದೆ. ಇದು ಕೇವಲ ಮೋದಿಯ ಅವಮಾನವಲ್ಲ, ಆದರೆ ಪ್ರತಿಯೊಬ್ಬ ಗುಜರಾತಿನ ಅವಮಾನ” ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆ ಪ್ರಕರಣ : ಸ್ವಾತಿ ಮಲಿವಾಲ್ ಹೊಸ ವೀಡಿಯೊ ಬಿಡುಗಡೆ ಮಾಡಿದ ಎಎಪಿ : ನಿಜವಾಗಿ ನಡೆದದ್ದು ಏನು..?

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement