ಬೆಳಗಾವಿ: ಅಕ್ರಮ ಗೋವು ಸಾಗಣೆ ಆರೋಪ ; ಲಾರಿ ಚಾಲಕನಿಗೆ ಥಳಿತ

ಬೆಳಗಾವಿ : ಬೆಳಗಾವಿ ಸುವರ್ಣ ವಿಧಾನಸೌಧ ಬಳಿ ಗೋವುಗಳನ್ನು ಕೊಂಡೊಯ್ಯುತ್ತಿದ್ದ ವಾಹನವನ್ನು ತಡೆದ ಹಿಂದೂಪರ ಸಂಘಟನೆ ಕಾರ್ಯಕರ್ತರು ಚಾಲಕನನ್ನು ತಡೆದು ಥಳಿಸಿದ ಘಟನೆ ಭಾನುವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ.
ಮಹಾರಾಷ್ಟ್ರದಿಂದ ಹುಬ್ಬಳ್ಳಿ ಕಡೆಗೆ ಗೋವುಗಳನ್ನು ಸಾಗಿಸಲಾಗುತ್ತಿತ್ತು ಎಂಬ ಮಾಹಿತಿ ಆಧರಿಸಿ  ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಲಾರಿಯನ್ನು ತಡೆದು ಚಾಲಕನನ್ನು ವಿಚಾರಿಸಿದ್ದಾರೆ. ಈ ಬಗ್ಗೆ ಚಾಲಕ ಹಾಗೂ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಇದು ವಿಕೋಪಕ್ಕೆ ಹೋಗಿ ಚಾಲಕನಿಗೆ ಥಳಿಸಲಾಗಿದೆ. ಲಾರಿಯ ಗಾಜು ಪುಡಿಯಾಗಿದೆ. ಚಾಲಕ ಉಮರ್ ಮೊಯುದ್ದೀನ್ (46) ಕಾಸರಗೋಡಿನವನಾಗಿದ್ದು ಇದೀಗ ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸುನಿಲಕುಮಾರ ಎಂಬ ಮತ್ತೊಬ್ಬ ಚಾಲಕನಿಗೂ ಏಟು ಬಿದ್ದಿದೆ.
ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಸ್ಥಳದಲ್ಲಿದ್ದ ಡಿಸಿಪಿ ರೋಹನ್ ಜಗದೀಶ ಅವರಿಗೆ ಶೆಟ್ಟರ್ ಅವರು ಸಂಪೂರ್ಣ ಮಾಹಿತಿ ನೀಡಿ ಅಕ್ರಮವಾಗಿ ಸಾಗಿಸುತ್ತಿರುವ ಜಾನುವಾರುಗಳನ್ನು ರಕ್ಷಿಸಿ, ತಪ್ಪಿತಸ್ಥನ ಮೇಲೆ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಪ್ರಮುಖ ಸುದ್ದಿ :-   ಮಹಿಳೆ ಅಪಹರಣ ಪ್ರಕರಣ ; ಎಚ್‌.ಡಿ. ರೇವಣ್ಣ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಬಂಧನದ ಭೀತಿ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement