ಕರ್ನಾಟಕದಲ್ಲಿ ಶನಿವಾರ ಹೊಸದಾಗಿ 801 ಜನರಿಗೆ ಕೊರೊನಾ ಸೋಂಕು; 15 ಮಂದಿ ಸಾವು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಶನಿವಾರ) ಹೊಸದಾಗಿ 801 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೇ ಸಮಯದಲ್ಲಿ ಕೊರೊನಾ ಸೋಂಕಿನಿಂದ 15 ಜನರ ಸಾವು ಸಂಭವಿಸಿದೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,60,932 ಕ್ಕೆ ಏರಿಕೆಯಾಗಿದೆ. ಒಟ್ಟು 29,06,746 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ಈವರೆಗೆ ಕೊರೊನಾದಿಂದ 37,487 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 16,672 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು 207 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,41,170 ಕ್ಕೆ ಏರಿಕೆಯಾಗಿದೆ. 12,17,893 ಜನರು ಗುಣಮುಖರಾಗಿದ್ದಾರೆ. ಇಂದು ಕೊರೊನಾ ಸೋಂಕಿನಿಂದ 2 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ 7,229 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರು ನಗರ 207 ಹೊರತುಪಡಿಸಿ ಪ್ರಮುಖವಾಗಿ ದಕ್ಷಿಣ ಕನ್ನಡ 133, ಕೊಡಗು 59, ಮೈಸೂರು 47, ಉಡುಪಿ 86 ಇಲ್ಲಿ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

ಪ್ರಮುಖ ಸುದ್ದಿ :-   ಬಿಜೆಪಿಯಿಂದ ಕೆ.ಎಸ್‌. ಈಶ್ವರಪ್ಪ ಉಚ್ಚಾಟನೆ

11-09-2021 HMB Kannada

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement