ಮೇ 31ರಂದೇ ಕರ್ನಾಟಕಕ್ಕೆ ಮುಂಗಾರು ಮಳೆ ಪ್ರವೇಶ : ಈ ಬಾರಿ ಉತ್ತಮ ಮಳೆ ನಿರೀಕ್ಷೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಈ ನಡುವಲ್ಲೇ ಹವಮಾನ ಇಲಾಖೆ ಕರ್ನಾಟಕಕ್ಕೆ ಮೇ 31 ರಂದು ನೈರುತ್ಯ ಮಾನ್ಸೂನ್‌ ಆಗಮಿಸಲಿದೆ ಎಂದು ಮಾಹಿತಿ ನೀಡಿದೆ.
ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟು ಕರ್ನಾಟಕ ಸೇರಿದಂತೆ ಹಲವಾರು ರಾಜ್ಯಗಳು ಭೀಕರ ಬರಗಾಲ ಎದುರಿಸಿದ್ದವು. ಆದರೆ, ಈ ಬಾರಿ ಉತ್ತಮವಾದ ಮುಂಗಾರು ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರ್ನಾಟಕ ರಾಜ್ಯದ ಕರಾವಳಿ ಭಾಗಕ್ಕೆ ಮುಂಗಾರು ಮಾರುತಗಳು ಜೂನ್‌ 2 ಅಥವಾ 3ಕ್ಕೆ ಪ್ರವೇಶ ಮಾಡುವ ನೀರಿಕ್ಷೆ ಇದೆ. ವಿವಿಧ ವ್ಯವಸ್ಥೆಗಳ ಪ್ರಗತಿ ಮತ್ತು ಹೊಸ ವ್ಯವಸ್ಥೆಗಳ ರಚನೆಯೊಂದಿಗೆ, ಮುಂಗಾರು ಪ್ರಾರಂಭವಾಗುವ ಸಾಧ್ಯತೆಯಿದೆ. ಮೇ 30 ರೊಳಗೆ ಕೇರಳ ಮತ್ತು ಮೇ 31 ರ ವೇಳೆಗೆ ಕರ್ನಾಟಕವನ್ನು ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ

ಮೇ 31ರವರೆಗೆ ರಾಜ್ಯದ ಬಹುತೇಕ ಭಾಗಗಳಲ್ಲಿ 40-50 ಕಿಮೀ ವೇಗದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗಾಳಿ ವೇಗ 65 ಕಿಮೀ ಇರಲಿದೆ ಎಂದು ಐಎಂಡಿ (IMD) ಮುನ್ಸೂಚನೆ ನೀಡಿದೆ.
ಅಲ್ಲದೆ, ಮೇ 26ರಂದು ಸಂಜೆ ರೆಮಲ್ ಚಂಡಮಾರುತ ಬಾಂಗ್ಲಾದೇಶ ಕರಾವಳಿ ಮೂಲಕ ಭಾರತದ ಈಶಾನ್ಯ ರಾಜ್ಯಗಳಿಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಈ ಮಧ್ಯೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರದ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಮುಂದಿನ 24 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳು ದಕ್ಷಿಣ ಕನ್ನಡ, ಉಡುಪಿ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಪ್ರಮುಖ ಸುದ್ದಿ :-   ಬೆಂಗಳೂರು ಬಳಿ ಯುವತಿಗೆ ಕಿರುಕುಳ ನೀಡಿ, ಹಲ್ಲೆಗೈದ ಗ್ಯಾಂಗ್ ; ಕೃತ್ಯ ಸಿಸಿಟಿವಿಯಲ್ಲಿ ಸೆರೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement