ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ನಿರ್ಮಾಣವಾಗಿರುವ ಭವ್ಯ ರಾಮಮಂದಿರದ ಲೋಕಾರ್ಪಣೆಗೆ ದಿನಗಣನೆ ಆರಂಭವಾಗಿದ್ದು, ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ ರಾಮಮಂದಿರ ಲೋಕಾರ್ಪಣೆ ಮಾಡಲಿದ್ದಾರೆ.
ಗರ್ಭಗುಡಿಯಲ್ಲಿ ರಾಮಲಲ್ಲಾನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗುತ್ತದೆ. ಈಗಾಗಲೇ ಸಾವಿರಾರು ಗಣ್ಯರಿಗೆ ರಾಮಮಂದಿರ ಟ್ರಸ್ಟ್‌ನಿಂದ ಆಹ್ವಾನ ಕಳುಹಿಸಲಾಗಿದೆ. ಉದ್ಘಾಟನಾ ಕಾರ್ಯಕ್ರಮಕ್ಕಾಗಿ ಭರದ ಸಿದ್ಧತೆ ನಡೆಸಲಾಗುತ್ತಿದೆ.
ಈ ಮಧ್ಯೆ ಶ್ರೀರಾಮನ ದರ್ಶನಕ್ಕಾಗಿ ಮುಂಬೈನ ಮುಸ್ಲಿಂ ಯುವತಿಯೊಬ್ಬರು ಅಯೋಧ್ಯೆ ಶ್ರೀರಾಮನ ದರ್ಶನಕ್ಕೆ ಪಾದಯಾತ್ರೆ ಮೂಲಕ ಹೊರಟಿದ್ದಾರೆ.
ಅಪ್ಪಟ ರಾಮನ ಭಕ್ತೆಯಾಗಿರುವ ಹಾಗೂ ತನ್ನನ್ನು ತಾನು ಸನಾತನಿ ಎಂದು ಕರೆದುಕೊಳ್ಳುವ ಶಬನಮ್ ಶೇಖ್ ಎಂಬ ಯುವತಿ ಮುಂಬೈನಿಂದ ಅಯೋಧ್ಯೆಗೆ ಪಾದಯಾತ್ರೆ ಹೊರಟಿದ್ದಾರೆ. ಶ್ರೀರಾಮನ ಧ್ವಜ ಹಿಡಿದುಕೊಂಡು ನಡೆಯುತ್ತಿರುವ ಶಬನಮ್ ಶೇಖ್ ಈಗಾಗಲೇ ನೂರಕ್ಕೂ ಹೆಚ್ಚು ಕಿಲೋಮೀಟರ್ ಮಾರ್ಗವನ್ನು ಪಾದಯಾತ್ರೆ ಮೂಲಕ ಕ್ರಮಿಸಿದ್ದಾರೆ. ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತ ಸಾಗುತ್ತಿರುವ ಇವರ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ನಿತ್ಯವೂ ಪಾದಯಾತ್ರೆಯ ವಿಡಿಯೊಗಳನ್ನು ಶಬನಮ್ ಅವರು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಅವರಿಗೆ ಸಾವಿರಾರು ಜನ ಬೆಂಬಲ ಸೂಚಿಸುತ್ತಿದ್ದಾರೆ.
View this post on Instagram
ರಾಮ ಮಂದಿರದ ಉದ್ಘಾಟನೆಯ ಸಮಯದಲ್ಲಿ, ರಾಮ ಲಲ್ಲಾ ಪ್ರತಿಷ್ಠಾಪನೆಯ ಜೊತೆಗೆ ರಾಷ್ಟ್ರವ್ಯಾಪಿ 5,00,000 ದೇವಾಲಯಗಳನ್ನು ಅಲಂಕರಿಸಲಾಗುತ್ತದೆ. ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ದೃಢೀಕರಿಸಿದಂತೆ ಆರ್‌ಎಸ್‌ಎಸ್ ಪ್ರಮುಖರು ಈ ಕಾರ್ಯಕ್ರಮಗಳನ್ನು ಮೇಲ್ವಿಚಾರಣೆ ಮಾಡುತ್ತಾರೆ, ಸನಾತನ ಧರ್ಮದ ಅನುಯಾಯಿಗಳು ಭೂಮಿಯಾದ್ಯಂತ ಪ್ರತಿ ದೇವಾಲಯದಲ್ಲಿ ಧಾರ್ಮಿಕ ಆಚರಣೆಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ನವೆಂಬರ್ 9, 2019 ರಂದು ಮಹತ್ವದ ಸುಪ್ರೀಂ ಕೋರ್ಟ್ ತೀರ್ಪು ರಾಮ ಮಂದಿರ ವಿವಾದವನ್ನು ಬಗೆಹರಿಸಿತು. ರಾಮ ಜನ್ಮಭೂಮಿಯಲ್ಲಿ ಭಗವಾನ್ ರಾಮನ ದೇವಾಲಯ ನಿರ್ಮಾಣಕ್ಕೆ ಅನುಮತಿ ನೀಡಿತು. ಆಗಸ್ಟ್ 5, 2020 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ದೇವಾಲಯಕ್ಕೆ ಅಡಿಪಾಯ ಹಾಕಿದರು.
ನಿಮ್ಮ ಕಾಮೆಂಟ್ ಬರೆಯಿರಿ