ದೆಹಲಿ ಗಣತಂತ್ರ ಪರೇಡ್‌ನಲ್ಲಿ ಈ ಸಲ ಕರ್ನಾಟಕದ ಸ್ತಬ್ಧಚಿತ್ರ ಇಲ್ಲ

ಬೆಂಗಳೂರು: ಈ ವರ್ಷದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಈ ಬಾರಿ ರಾಜ್ಯದ ಸ್ತಬ್ಧಚಿತ್ರ ಇರುವುದಿಲ್ಲ ಎಂದು ವರದಿಗಳು ತಿಳಿಸಿವೆ.ವರದಿಗಳು
ದೆಹಲಿಯಲ್ಲಿ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸಂಸ್ಕೃತಿ, ಕಲೆ, ಬಿಂಬಿಸುವ ಸ್ತಬ್ಧ ಚಿತ್ರಗಳು ಪ್ರಮುಖ ಆಕರ್ಷಣೆಯಾಗಿದ್ದವು. ಈ ಬಾರಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವ ತೀರ್ಮಾನಕ್ಕೆ ಪ್ರತಿಪಕ್ಷಗಳು ಕಿಡಿಕಾರಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರ್ನಾಟಕದ ಸ್ತಬ್ದ ಚಿತ್ರಕ್ಕೆ ಅನುಮತಿ ಸಿಗುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೇರೆ ರಾಜ್ಯಗಳಿಗೆ ಅವಕಾಶ ಕಲ್ಪಿಸಲು ಈ ಬಾರಿ ರಾಜ್ಯದ ಸ್ತಬ್ಧ ಚಿತ್ರಕ್ಕೆ ಅನುಮತಿ ನಿರಾಕರಿಸಲಾಗಿದೆ ಎಂದು ಹೇಳಲಾಗಿದ್ದರೂ ಇದು ವ್ಯಾಪಕ ಟೀಕೆಗೆ ಒಳಗಾಗಿದೆ.
ಕಳೆದ 13 ವರ್ಷಗಳಿಂದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಪಾಲ್ಗೊಂಡಿತ್ತು. ಹಲವು ಬಾರಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಬಹುಮಾನಗಳು ಬಂದಿದೆ. ಕಳೆದ ಬಾರಿ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಕುರಿತ ಸ್ತಬ್ಧ ಚಿತ್ರಕ್ಕೆ ದ್ವಿತೀಯ ಸ್ಥಾನ ಲಭಿಸಿತ್ತು. ಆದರೆ ಈ ಬಾರಿ ಅವಕಾಶ ದೊರೆಯದಿರುವುದು ರಾಜ್ಯದ ಜನತೆಗೆ ಬೇಸರ ಉಂಟು ಮಾಡಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್ ಪ್ರಕರಣದ ಹಿಂದೆ ಡಿಕೆ ಶಿವಕುಮಾರ ಕೈವಾಡ : ವಕೀಲ ದೇವರಾಜೇಗೌಡ ಗಂಭೀರ ಆರೋಪ

ಈ ಬಾರಿ ಮಹಿಳಾ ಸಬಲೀಕರಣ ಥೀಮ್ ಇಟ್ಟುಕೊಂಡು ಸ್ತಬ್ಧಚಿತ್ರ ಸಿದ್ಧಗೊಳಿಸಲು ನಿರ್ಧರಿಸಲಾಗಿತ್ತು. ಆದರೆ, ಕೇಂದ್ರ ಸರ್ಕಾರ ಅನುಮತಿ ನೀಡಿಲ್ಲ. ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ತಮಿಳುನಾಡು, ಕೇರಳ ಸೇರಿದಂತೆ 13 ರಾಜ್ಯಗಳ ಸ್ತಬ್ಧಚಿತ್ರಗಳನ್ನು ಆಯ್ಕೆ ಮಾಡಲಾಗಿದೆ.
ದೆಹಲಿಯ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಕರ್ನಾಟಕ ಸ್ತಬ್ದಚಿತ್ರಕ್ಕೆ ಅವಕಾಶ ಪಡೆಯಲು ಪ್ರಯತ್ನ ನಡೆಸಿದ್ದೇನೆ. ಅವಕಾಶ ಸಿಗಲಿದೆ ಎಂಬ ವಿಶ್ವಾಸ ತಮಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಸ್ತಬ್ದಚಿತ್ರವನ್ನು ತಿರಸ್ಕರಿಸಿಲ್ಲ. ಬೇರೆ ರಾಜ್ಯಗಳಿಗೆ ಅವಕಾಶ ಕೊಡಬೇಕು ಎಂಬ ಕಾರಣಕ್ಕೆ ಈ ಬಾರಿ ರಾಜ್ಯಕ್ಕೆ ಅವಕಾಶ ಸಿಕ್ಕಿಲ್ಲ. ಆದರೂ ನಾವು ಪ್ರಯತ್ನ ನಡೆಸಿದ್ದೇವೆ. ಇನ್ನೂ ಅವಕಾಶವಿದೆ. ಕರ್ನಾಟಕದ ಸ್ಥಬ್ದಚಿತ್ರ ಈ ಬಾರಿಯೂ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಇರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

3 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement