ರಾಜ್ಯದ ಕರಾವಳಿಯಲ್ಲಿ ಎರಡು ದಿನ ಭಾರೀ ಮಳೆ ಮುನ್ಸೂಚನೆ : ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಈಗಾಗಲೇ ಭಾರೀ ಮಳೆಯಿಂದಾಗಿ ರಾಜ್ಯದ ಜನ ತತ್ತರಿಸಿದ್ದು, ಈ ಮಧ್ಯೆ ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಬ್ಬೀ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿಯ ಪರಿಣಾಮದಿಂದಾಗಿ ರಾಜ್ಯಾದ್ಯಂತ ಇನ್ನೂ ನಾಲ್ಕು ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹೇಳಿದ್ದು  ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ರೆಡ್ ಅಲರ್ಟ್ (Red Alert) ಘೋಷಣೆ ಮಾಡಿದೆ.ದಕ್ಷಿಣ ಒಳನಾಡಿನಲ್ಲಿ ಮೂರು ದಿನ ಆರೆಂಜ್ ಅಲರ್ಟ್ ಘೋಷಿಸಿದೆ. ದಕ್ಷಿಣ ಒಳಭಾಗದಲ್ಲೂ ಅತಿಹೆಚ್ಚು ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಹಾಸನ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಹಿನ್ನೆಲೆ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ ಕಲಬುರ್ಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಪ್ರಮುಖ ಸುದ್ದಿ :-   ಇಂದು ಸಿಎಂ ಆಗಿ ಡಿಕೆ ಶಿವಕುಮಾರ ಪ್ರಮಾಣ ವಚನ: ಪರಮೇಶ್ವರ ಡಿಸಿಎಂ ; 13 ಶಾಸಕರಿಗೆ ಸಚಿವ ಸ್ಥಾನ ; ಪಟ್ಟಿ ಇಲ್ಲಿದೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement