ಬೆಂಗಳೂರು :ಕರ್ನಾಟಕದಲ್ಲಿ ಮಂಗಳವಾರ ಮತ್ತೆ ನಲವತ್ತು ಸಾವಿರಕ್ಕೂ ಹೆಚ್ಚು ಕೊರೊನಾ ಸೋಂಕು ದಾಖಲಾಗಿದೆ.
ಕಳೆದ 24 ಗಂಟೆಯಲ್ಲಿ ಹೊಸದಾಗಿ 44631 ಜನರಿಗೆ ಕೊರೊನಾ ಸೋಂಕು ದಾಖಲಾದ ವರದಿಯಾಗಿದೆ.
ಇದೇ ಸಮಯದಲ್ಲಿ 292 ಸೋಂಕಿತರು ಮೃತಪಟ್ಟಿದ್ದಾರೆ.
ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ 16538 ಜನರು ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 24714 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 464363 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1690934ಕ್ಕೆ ಏರಿಕೆಯಾಗಿದೆ.ಹಾಗೂ ಒಟ್ಟು ದುವರೆಗೆ 1210013 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ
ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 20870 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ನಿಮ್ಮ ಕಾಮೆಂಟ್ ಬರೆಯಿರಿ