ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯ ಆರು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಬುಧವಾರ (ಆಗಸ್ಟ್ 20) ರಜೆ ಘೋಷಿಸಲಾಗಿದೆ.
ಹವಾಮಾನ ಇಲಾಖೆ (IMD), ಬೆಂಗಳೂರು ಭಾರಿ ಮಳೆ ಮುನ್ಸೂಚನೆ ನೀಡಿರುವುದರಿಂದ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ, ದಾಂಡೇಲಿ ಮತ್ತು ಜೊಯಿಡಾ ತಾಲೂಕುಗಳ ಅಂಗನವಾಡಿಮ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಿರಂತರ ಮಳೆ ಮುಂದುವರಿದಿರುವುದರಿಂದ, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.
ವಿದ್ಯಾರ್ಥಿಗಳಿಗೆ ಯಾವುದೇ ಅನಾನುಕೂಲ ಅಥವಾ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ