ಕೋವಿಡ್ 3ನೇ ಅಲೆ, ತಜ್ಞರ ಎಚ್ಚರಿಕೆ ಗಂಭೀರವಾಗಿ ಪರಿಗಣಿಸಿ : ಖಾಸಾಮಠ ಶ್ರೀಗಳು 

ಯಾದಗಿರಿ: ತಜ್ಞರು ಕೊರೊನಾ ವೈರಸ್ 3ನೇ ಅಲೆ ಮಕ್ಕಳಿಗೆ ಅಪಾಯಕಾರಿ ಎಂದು ಎಚ್ಚರಿಕೆ ನೀಡಿರುವುದನ್ನು ನಾವೆಲ್ಲರೂ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಗುರುಮಠಕಲ್ ಖಾಸಾಮಠದಶ್ರೀ ಶಾಂತವೀರ ಸ್ವಾಮಿಗಳು ಹೇಳಿದ್ದಾರೆ.
ಸೋಮವಾರ ಪತ್ರಿಕಾ ಭವನದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನಾಡಿನಲ್ಲಿ ಈ ವರ್ಷ ಕೊರೊನಾ ವೈರಸ್ ಎರಡನೇ ಅಲೆ ಉಲ್ಬಣದಿಂದ ಜನರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಸದ್ಯ ಅದರ ಪ್ರಭಾವ ಕಡಿಮೆಯಾಗುತ್ತಿದೆ. ಆದರೆ ತಜ್ಞರು ಕೊರೊನಾ ವೈರಸ್ 3 ನೇ ಅಲೆ ಮಕ್ಕಳಿಗೆ ಅಪಾಯಕಾರಿ ಎಂದು ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ನಾವು ನಾವೆಲ್ಲರೂ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.
ವೈರಸ್ ಎರಡನೇ ಅಲೆಯಿಂದ ದೇಶದಲ್ಲಿ ಸಾಕಷ್ಟು ಸಾವು, ನೋವು ಸಂಭವಿಸಿವೆ. ತಜ್ಞರು ಈಗಾಗಲೇ ಮೂರನೇ ಅಲೆ ಮಕ್ಕಳಿಗೆ ಹೆಚ್ಚು ಹಾನಿ ಮಾಡಬಹುದು ಎಂದು ಎಚ್ಚರಿಕೆ ನೀಡುತ್ತ ಬಂದಿದ್ದಾರೆ. ಇದು ಆಘಾತಕಾರಿ ವಿಷಯ. ಪೋಷಕರು ತಮ್ಮ ಮಕ್ಕಳ ಚಲನವಲನಗಳ ಮೇಲೆ ನಿಗಾ ಇಡಬೇಕು. ಮನೆಯಿಂದ ಹೊರಗೆ ಕಳುಹಿಸಬಾರದು.ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.
ಭವಿಷ್ಯದ ರಾಷ್ಟ್ರದ ಸಂಪತ್ತಾರಾಗಿರುವ ಮಕ್ಕಳಿಗೆ ಅಗತ್ಯ ಆರೋಗ್ಯ ಸಲಹೆ ಸೂಚನೆಗಳನ್ನು ನೀಡುವ ಜೊತೆಗೆ ಪೌಷ್ಟಿಕ ಆಹಾರ ನೀಡಿ ಅವರ ಆರೋಗ್ಯ ರಕ್ಷಣೆ ಕಡೆಗೆ ಗಮನ ನೀಡಬೇಕೆಂದು ಸಲಹೆ ನೀಡಿದರು.

ಪ್ರಮುಖ ಸುದ್ದಿ :-   ಶಿರಸಿ: ಕೆಪಿಸಿಸಿ ಸದಸ್ಯ ದೀಪಕ ದೊಡ್ಡೂರು, ಇತರರ ನಿವಾಸದ ಮೇಲೆ ಐಟಿ ದಾಳಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement