ಕಲಬುರ್ಗಿ: ಹಿರಿಯ ಪತ್ರಕರ್ತ ಹಾಗೂ ಸಂಯುಕ್ತ ಕರ್ನಾಟಕ ಕಲಬುರ್ಗಿ ಆವೃತ್ತಿಯ ಸ್ಥಾನಿಕ ಸಂಪಾದಕರಾದ ಜಯತೀರ್ಥ ಕಾಗಲಕರ್ (53) ಅವರು ಗುರುವಾರ ಕೊರೊನಾ ಸೋಂಕಿನಿಂದ ನಗರದ ಖಾಸಗಿ ಅಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ.
ಒಂದು ವಾರದ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿದ್ದ ಅವರನ್ನು ಚಿಕಿತ್ಸೆಗಾಗಿ ನಗರದ ಕಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ನಿಧನರಾಗಿದ್ದಾರೆ.
ಸುಮಾರು ಮೂವತ್ತು ವರ್ಷಗಳಿಂದ ಸಂಯುಕ್ತ ಕರ್ನಾಟಕದ ವರದಿಗಾರಿಕೆ ಸೇರಿದಂತೆ ವಿವಿ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದ ಅವರು ಆನಂತರದಲ್ಲಿ ಸ್ಥಾನಿಕ ಸಂಪಾದಕರಾಗಿದ್ದರು.


ನಿಮ್ಮ ಕಾಮೆಂಟ್ ಬರೆಯಿರಿ