ರಿಕ್ಕಿ ರೈ ಮೇಲೆ ಗುಂಡಿನ ದಾಳಿ ; ಮುತ್ತಪ್ಪ ರೈ 2ನೇ ಪತ್ನಿ ಸೇರಿ ನಾಲ್ವರ ವಿರುದ್ಧ ಎಫ್‌ ಐಆರ್‌

ರಾಮನಗರ: ಭೂಗತ ಲೋಕದ ಮಾಜಿ ಡಾನ್‌ ಮುತ್ತಪ್ಪ ರೈ ಅವರ ಪುತ್ರ 35 ವರ್ಷದ ರಿಕ್ಕಿ ರೈ ಮೇಲೆ ಬಿಡದಿ ಸಮೀಪದ ಕರಿಯಪ್ಪನದೊಡ್ಡಿಯಲ್ಲಿ ರಾತ್ರಿ ನಡೆದ ಗುಂಡಿನ ದಾಳಿ ನಡೆದ ಪ್ರಕರಣದಲ್ಲಿ ಬಿಡದಿ ಪೊಲೀಸ್ ಠಾಣೆಯಲ್ಲಿ ಶನಿವಾರ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಿಕ್ಕಿ ಅವರ ಕಾರು ಚಾಲಕ ಜಿ. ಬಸವರಾಜು ನೀಡಿದ ದೂರಿನ ಮೇರೆಗೆ ರಾಕೇಶ ಮಲ್ಲಿ, ಮುತ್ತಪ್ಪ ರೈ ಅವರ ಎರಡನೇ ಪತ್ನಿ ಅನುರಾಧ, ನಿತೇಶ ಶೆಟ್ಟಿ, ವೈದ್ಯನಾಥನ್ ಎಂಬವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.
ಗುಂಡಿನ ದಾಳಿಯಲ್ಲಿ ರಿಕ್ಕಿ ರೈ ಸ್ವಲ್ಪದರಲ್ಲೇ ಪಾರಾಗಿದ್ದಾರೆ, ಅವರಿಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಘಟನೆ ವೇಳೆ ಕಾರು ಚಾಲನೆ ಮಾಡುತ್ತಿದ್ದ ಬಸವರಾಜ ನೀಡಿದ ದೂರು ಆಧರಿಸಿ ನಾಲ್ವರ ವಿರುದ್ಧ ಬಿಎನ್​ಎಸ್ 109,3(5) ಹಾಗೂ ಆರ್ಮ್ಸ್ ಆ್ಯಕ್ಟ್ ಅಡಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ರಿಯಲ್ ಎಸ್ಟೇಟ್ ವಿಚಾರವಾಗಿ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪ್ರಮುಖ ಸುದ್ದಿ :-   ಏರ್ ಇಂಡಿಯಾ ವಿಮಾನದಲ್ಲಿ 7 ಮಂದಿ ಅಸ್ವಸ್ಥ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement