ಕರ್ನಾಟಕದ 6 ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆ ಮುನ್ಸೂಚನೆ ; 3 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ಬೆಂಗಳೂರು : ರಾಜ್ಯದಲ್ಲಿ ‌ಕೆಲವು ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜುಲೈ 17ರಂದು ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಹಾಗೂ ಮೂರು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ನೀಡಲಾಗಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು ಬುಧವಾರ (ಜುಲೈ 17) ರೆಡ್‌ ಅಲರ್ಟ್ ನೀಡಲಾಗಿದೆ ಹಾಗೂ ಜುಲೈ 20 ರವರೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡುಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಈ ಜಿಲ್ಲೆಗಳಿಗೆ ಬುಧವಾರ (ಜುಲೈ 17) ಆರೆಂಜ್ ಅಲರ್ಟ್ ನೀಡಲಾಗಿದೆ ಹಾಗೂ ಹಾಸನ ಜಿಲ್ಲೆಗೆ ಯಲ್ಲೋ ಅಲರ್ಟ್‌ ನೀಡಲಾಗಿದೆ. ಚಕ್ಕಮಗಳೂರು ಹಾಗೂಶಿವಮೊಗ್ಗ ಜಿಲ್ಲೆಗೆ ಜುಲೈ 20 ರವರೆಗೆ ಆರೆಂಜ್‌ ಅಲರ್ಟ್‌ ನೀಡಿದರೆ ಹಾಸನ್‌ ಹಾಗೂ ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.ಈ ದಿನಗಳಲ್ಲಿ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ ಹಾಗೂ ಕಲಬುರ್ಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement