ನಾಳೆ ಧಾರವಾಡ- ಉತ್ತರ ಕನ್ನಡಕ್ಕೆ ಸಿಎಂ ಪ್ರವಾಸ

ಹುಬ್ಬಳ್ಳಿ: ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜುಲೈ 29ರಂದು ಧಾರವಾಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ.
ಜುಲೈ 29ರಂದು ಬೆಳಗ್ಗೆ 10:30 ಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸುವರು. 10:45 ಕ್ಕೆ ರಸ್ತೆಯ ಮೂಲಕ ಉತ್ತರ ಕನ್ನಡ ಜಿಲ್ಲೆಗೆ ಪ್ರವಾಸ ಕೈಗೊಳ್ಳಲಿದ್ದಾರೆ. . ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಿಂದ ರಸ್ತೆ ಮೂಲಕ ಹೊರಟು ಸಂಜೆ 5.30 ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣ ತಲುಪಲಿದ್ದು. 6 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಹೊರಟು ರಾತ್ರಿ 7 ಗಂಟೆಗೆ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣ ತಲುಪುವರು ಎಂದು ಪ್ರಕಟಣೆ ತಿಳಿಸಿದೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement