ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಲವಾದ ಗಾಳಿಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದಲ್ಲಿ ಕೆಲ ದಿನಗಳ ಕಾಲ ಗುಡುಗು – ಮಿಂಚು ಸಹಿತ ಗಾಳಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಂಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ವೇಳೆ ಗಾಳಿಯ ವೇಗ ಪ್ರತಿ ಗಂಟೆಗೆ 40 – 50 ಕಿ.ಮೀ. ವರೆಗೆ ಇರಬಹುದು. ಕೆಲವು ಕಡೆ 60 ಕಿ.ಮೀ.ವರೆಗೆ ಗಾಳಿ ಬೀಸುವ ಸಾಧ್ಯತೆಯಿದೆ. ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 23 ಹಾಗೂ 24ರಂದು ಅಲ್ಲಲ್ಲಿ ಜೋರಾಗಿ ಮಳೆ ಬೀಳಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು ಹಾಗೂ ಶಿವಿಮೊಗ್ಗ ಜಿಲ್ಲೆಗಳಲ್ಲಿಯೂ ಈ ಎರಡು ದಿನ ಜೋರಾಗಿ ಮಳೆ ಬೀಳಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ 30 ರಿಂದ 40 ಕಿ.ಮೀ ವೇಗದ ಬಲವಾದ ಗಾಳಿ ಬೀಸಲಿದ್ದು, ಗಾಳಿ ಮಳೆಯಾಗಲಿದೆ. ಮೀನುಗಾರರಿಗೆ ಕಡಲಿಗೆ ತೆರಳದಂತೆ ಸೂಚಿಸಲಾಗಿದೆ. ಉತ್ತರ ಒಳನಾಡಿನ ವಿಜಯಪುರ, ಕಲಬುರಗಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಅತ್ಯಂತ ವೇಗವಾಗಿ (ಗಂಟೆಗೆ 40 – 50 ಕಿ.ಮೀ) ಬೀಸುವ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಗಾಳಿ ಬೀಸಲಿದೆ.
ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಹುಗರವಾಗಿ ಮಳೆಯಾಗುವ ಸಾಧ್ಯತೆಯಿದೆ. ಹಾಸನ ಮತ್ತು ಕೊಡಗು ಭಾಗಗಳಲ್ಲೂ ಗುಡುಗು ಸಹಿತ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ಕೊಡಗು; ಕಾಡಾನೆ ದಾಳಿಗೆ ಬೆಂಗಳೂರು ಪ್ರವಾಸಿಗ ಸಾವು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement