ದಾಂಡೇಲಿ : ಮಾಡಿಕೊಂಡ ಸಾಲ ತೀರಿಸಲು 20 ದಿನದ ಮಗು ಮಾರಾಟ ಮಾಡಿದ ದಂಪತಿ‌…!

ಕಾರವಾರ : ಮಾಡಿಕೊಂಡ ಸಾಲ ತೀರಿಸಲು ದಂಪತಿ‌ ತಮ್ಮ 20 ದಿನದ ಮಗುವನ್ನು ಮಾರಾಟ ಮಾಡಿರುವ ಘಟನೆ ಉತ್ತರ ಕ‌ನ್ನಡ ಜಿಲ್ಲೆಯ ದಾಂಡೇಲಿ (Dandeli) ತಾಲೂಕಿನ ಹಳೇ ದಾಂಡೇಲಿಯಲ್ಲಿ ನಡೆದಿದೆ.
ಹಳೇ ದಾಂಡೇಲಿಯ ದೇಶಪಾಂಡೆ ನಗರದ ನಿವಾಸಿಯಾದ ಮಾಹೀನ್ ಎಂಬ ಮಹಿಳೆ ಜೂನ್ 17 ರಂದು ದಾಂಡೇಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಮಗುವಿನ ತಂದೆ ವಸೀಂ ಚಂಡು ಪಟೇಲ್ ಎಂಬವರು ಸಾಲ ಮಾಡಿಕೊಂಡಿದ್ದರು. ಸಂಘದ ಸಾಲಗಾರರು ಸಾಲದ ಹಣವನ್ನು ವಾಪಸ್​ ನೀಡುವಂತೆ ಬೆನ್ನು ಬಿದ್ದಿದ್ದರು. ಸಾಲಗಾರರ ಕಾಟದಿಂದ ಪಾರಾಗಲು ವಸೀಂ ಚಂಡು ಪಟೇಲ್ ಮತ್ತು ಮಾಹೀನ್ ದಂಪತಿ 20 ದಿನದ ಮಗುವನ್ನು 3 ಲಕ್ಷ ರೂಪಾಯಿಗೆ ಮಾರಾಟ ಮಾಡಿದ್ದಾರೆ. ಆದರೆ ಅಂಗನವಾಡಿ ಕಾರ್ಯಕರ್ತೆ ನೀಡಿದ ದೂರಿನಿಂದ ಪ್ರಕರಣ ಬೆಳಕಿಗೆ ಬಂದಿದ್ದು, ಪೊಲೀಸರು ಕಾರ್ಯಾಚರಣೆ ನಡೆಸಿ ಮಗುವನ್ನು ರಕ್ಷಿಸಿದ್ದಾರೆ.

ಘಟನೆ ವಿವರ
ವಸೀಂ ಮೈತುಂಬಾ ಸಾಲ ಮಾಡಿಕೊಂಡಿದ್ದರು. ಸಂಘದ ಸಾಲಗಾರರು ಪದೇ ಪದೇ ಮನೆಗೆ ಆಗಮಿಸಿ ಸಾಲ ಮರುಪಾವತಿಸುವಂತೆ ಒತ್ತಡ ಹಾಕಿದ್ದರು. ಪ್ರತಿ ದಿನ ಒಂದಲ್ಲಾ ಒಂದು ಸಾಲಗಾರರು ಮನೆಗೆ ಆಗಮಿಸಲು ಆರಂಭಿಸಿದ್ದರು. ವಸೀಂ ಹಾಗೂ ಮಾಹೀನ್ ದಂಪತಿ ಕೊನೆಗೆ ತಮ್ಮ ಮಗುವನ್ನೇ ಮಾರಾಟ ಮಾಡಲು ನಿರ್ಧರಿಸಿದರು. ಜುಲೈ 8ರಂದು ಧಾರವಾಡಕ್ಕೆ ಹೋಗಿ, ಬೆಳಗಾವಿ ಮೂಲದ ನೂ‌ರ್ ಅಹಮ್ಮದ್ ಎಂಬಾತನಿಗೆ 3 ಲಕ್ಷ ರೂ.ಗಳಿಗೆ ಮಗುವನ್ನು ಮಾರಾಟ ಮಾಡಿದರು. ಮಗುವಿನ ಆರೈಕೆ, ಸರ್ಕಾರದ ಸವಲತ್ತಿಗಾಗಿ ದಂಪತಿ ತಾಯಿಕಾರ್ಡ್ ಸೇರಿದಂತೆ ಇತರ ದಾಖಲೆ ಪತ್ರಗಳನ್ನು ಅಂಗನವಾಡಿ ಕಾರ್ಯಕರ್ತೆ ರೇಷ್ಮಾ ಮಹಾದೇವ ಪಾವಸ್ಕರ ಮಾಡಿಕೊಟ್ಟಿದ್ದರು. ಮಗು ಜನಸಿದ ಬಳಿಕ ಅವರು ಮನೆಗೆ ತೆರಳಿದಾಗ ಮಗು ಇಲ್ಲದಿರುವುದನ್ನು ಕಂಡು ಅವರಿಗೆ ಅನುಮಾನ ಬಂದಿದೆ. ಈ ಬಗ್ಗೆ ವಿಚಾರಿಸಿದಾಗ ಸಮರ್ಪಕ ಉತ್ತರ ದೊರಕಲಿಲ್ಲ. ಇದರಿಂದ ಸಂಶಯಗೊಂಡ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಮುಖ ಸುದ್ದಿ :-   ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ ನೇಮಕ

ಪ್ರಕರಣ ದಾಖಲಿಸಿಕೊಂಡ ದಾಂಡೇಲಿ ನಗರ ಠಾಣೆಯ ಪೊಲೀಸರು, ಪಿಎಸ್ಐಗಳಾದ ಅಮೀನ್ ಅತ್ತಾರ ಮತ್ತು ಕಿರಣ್ ಪಾಟೀಲ್ ನೇತೃತ್ವದಲ್ಲಿ ಎಎಸ್ಐ ಬಸವರಾಜ ಒಕ್ಕುಂದ, ಪೊಲೀಸ್ ಸಿಬ್ಬಂದಿಗಳಾದ ಸಿದ್ರಾಮ್ ರಾಮರಥ, ಚಂದ್ರಶೇಖರ ಪಾಟೀಲ್, ಜ್ಯೋತಿ ಬಾಳೇಕರ, ಮಹಾಂತೇಶ ಜಾಮಗೌಡ ಜತೆ ಬೆಳಗಾವಿಗೆ ಹೋಗಿ ಆರೋಪಿಗಳನ್ನು ಬಂಧಿಸಿ, ಮಾರಾಟ ಮಾಡಿದ್ದ ಮಗುವನ್ನು ರಕ್ಷಿಸಿದ್ದಾರೆ. ಸುರಕ್ಷತಾ ದೃಷ್ಟಿಯಿಂದ ಮಗುವನ್ನು ಶಿರಸಿಯಲ್ಲಿರುವ ಮಕ್ಕಳ ಕಲ್ಯಾಣ ಸಮಿತಿಗೆ ಹಸ್ತಾಂತರಿಸಿದ್ದಾರೆ. ಪ್ರಕರಣದಲ್ಲಿ ಮಗುವನ್ನು ಖರೀದಿಸಿದ ಆರೋಪಿಗಳಾದ ಬೆಳಗಾವಿ ಜಿಲ್ಲೆಯ ಆನಗೋಳದ ನಿವಾಸಿಗಳಾದ ನೂರು ಮಹಮ್ಮದ್ ಅಬ್ದುಲ್ ಮಜೀದ್ ಮತ್ತು ಕಿಶನ್ ಶ್ರೀಕಾಂತ ಐರೇಕರ ಎಂಬವರನ್ನು ಬಂಧಿಸಿದ್ದಾರೆ. ಉಳಿದ ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆದಿದೆ .

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement