ಶ್ರೀನಗರ: ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮಂಗಳವಾರ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಭಯೋತ್ಪಾಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ ಎಂದು ಜಮ್ಮು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಶೋಪಿಯಾನ್ನ ನಾಗಬಾಲ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ದೊರೆತ ನಂತರ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದವು. ಈ ಶೋಧ ಕಾರ್ಯಾಚರಣೆಯ ವೇಳೆ ಮೂವರು ಉಗ್ರರನ್ನು ಎನ್ಕೌಂಟರ್ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹತ್ಯೆಗೀಡಾದ ಭಯೋತ್ಪಾದಕರು ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್ಇಟಿಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. ಹಾಗೂ, ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆಯುತ್ತಿರುವ ಈ ಶೋಧ ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ ಎಂದೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ