ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 2000 ಹೆಚ್ಚುವರಿ ಬಸ್‌ ಕಾರ್ಯಾಚರಣೆ

ಬೆಂಗಳೂರು : ದಸರಾ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ(ಕೆಎಸ್‌ಆರ್‌ಟಿಸಿ) 2000 ಹೆಚ್ಚುವರಿ ಬಸ್‌‌ಗಳನ್ನು ನಿಯೋಜನೆ ಮಾಡಲಾಗಿದೆ. ಹಾಗೂ ಹಬ್ಬದ ಪ್ರಯುಕ್ತ ಪ್ರಯಾಣಿಕರಿಗೆ ವಿಶೇಷ ರಿಯಾಯಿತಿ ನೀಡಲಾಗಿದೆ. ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗಾಗಿ (Mysore Dasara) ಮೈಸೂರಿಗೆ ತೆರಳುವ ಪ್ರವಾಸಿಗರಿಗಾಗಿ 600 ದಸರಾ ವಿಶೇಷ ಬಸ್‌ಗಳನ್ನು ನಿಯೋಜಿಸಲಾಗಿದೆ.
ಸಾಲು ಸಾಲಾಗಿ ಹಬ್ಬಗಳು ಬರುತ್ತಿರುವ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳುತ್ತಿರುವುದರಿಂದ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ಬಸ್ ನಿಲ್ದಾಣ ಹಾಗೂ ಶಾಂತಿನಗರ ಬಸ್ ನಿಲ್ದಾಣದಿಂದ ಹೆಚ್ಚಿನ ಬಸ್ ಸೇವೆಗಳನ್ನ ಒದಗಿಸಲಾಗಿದೆ. ಮಂಗಳೂರು, ಮಡಿಕೇರಿ, ಶಿವಮೊಗ್ಗ, ದಾವಣಗೆರೆ, ಗೋಕರ್ಣ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಗೆ ಕೂಡ ಹೆಚ್ಚುವರಿ ಬಸ್ ಸೇವೆಗಳನ್ನು ಒದಗಿಸಲು ಸಾರಿಗೆ ಸಂಸ್ಥೆ ಸೂಚಿಸಿದೆ.

ಹೆಚ್ಚುವರಿ ಬಸ್ ಗಳ ಸೇವೆಯು ಅಕ್ಟೋಬರ್‌ 20ರಿಂದ 26ರವರೆಗೆ ಕಾರ್ಯರೂಪದಲ್ಲಿರುತ್ತವೆ ಎಂದು ಸಾರಿಗೆ ನಿಗಮವು ತಿಳಿಸಿದೆ.
ಅದೇ ರೀತಿ ಅಕ್ಟೋಬರ್‌ 24ರಿಂದ 29ರವರೆಗೆ ರಾಜ್ಯ ಮತ್ತು ನೆರೆ ರಾಜ್ಯಗಳ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ.
ರಾಜ್ಯದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು. ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆ ರಾಜ್ಯಗಳಲ್ಲಿನ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್‌, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪೂನಾ, ಏರ್ನಾಕುಲಂ, ಪಾಲ್ಗಾಟ್ ಹಾಗೂ ಇತರೆ ಸ್ಥಳಗಳಿಗೆ ವಿಶೇಷ ಸಾರಿಗೆ ನಿಯೋಜನೆ ಮಾಡಲಾಗುತ್ತದೆ.
ಒಂದೇ ಬಾರಿಗೆ 4ಕ್ಕಿಂತ ಹೆಚ್ಚಿನ ಟಿಕೆಟ್ ಖರೀದಿಸಿದ್ದಲ್ಲಿ 5% ರಿಯಾಯಿತಿ ನೀಡಲಾಗುತ್ತಿದ್ದು, ಹೋಗುವಾಗ ಮತ್ತು ಬರುವಾಗ ಟಿಕೆಟ್ ಒಟ್ಟಿಗೆ ಕಾಯ್ದಿರಿಸಿದಲ್ಲಿ 10% ರಿಯಾಯಿತಿ ನೀಡುವುದಾಗಿ ಕೆ ಎಸ್ ಆರ್ ಟಿಸಿ ತಿಳಿಸಿದೆ.

ಪ್ರಮುಖ ಸುದ್ದಿ :-   ದೆಹಲಿಯಲ್ಲಿ ಮತ್ತೆ ಕಾಂಗ್ರೆಸ್ಸಿಗೆ ಆಘಾತ : ಪಕ್ಷಕ್ಕೆ ರಾಜೀನಾಮೆ ನೀಡಿದ ಇಬ್ಬರು ಹಿರಿಯ ನಾಯಕರು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement