ಸಿಎಂ ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ ಪೋಸ್ಟ್‌ : 7 ಜನರ ವಿರುದ್ಧ ಎಫ್‌ಐಆರ್‌

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಹಿಂದೂ ವೋಟ್ ಬೇಡ, ಮುಸ್ಲಿಂ ವೋಟ್ ಸಾಕು ಎಂಬ ಸುಳ್ಳು ಸುದ್ದಿಯನ್ನು ದಿನ ಪತ್ರಿಕೆಯಲ್ಲಿ ಪ್ರಕಟವಾಗಿದೆ ಎಂಬಂತೆ ಪೋಸ್ಟ್‌ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಈ ಬಗ್ಗೆ ದೂರು ನೀಡಿದೆ. ಈ ದೂರಿನ ಅನ್ವಯ ಏಳು ಜನರ ವಿರುದ್ಧ ದೂರು ದಾಖಲಾಗಿದೆ.
ಮುಸ್ಲಿಂರ ಓಲೈಕೆ ಕುರಿತು ಬಿಜೆಪಿಗರ ಟೀಕೆ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ,’ ಎಂದು ಸಿಎಂ ಸಿದ್ದರಾಮಯ್ಯ ಖಾಸಗಿ ಹೋಟೆಲ್ ಒಂದರಲ್ಲಿ ನಡೆದ ಹೋಬಳಿ ಮಟ್ಟದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಹೇಳಿದ್ದಾರೆ ಎನ್ನುವ ಪತ್ರಿಕಾ ಹೇಳಿಕೆ ರೀತಿಯ ಪೋಸ್ಟರ್‌ ಒಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ಇದು ಸುಳ್ಳು ಸುದ್ದಿ ಎಂಬುದು ಫ್ಯಾಕ್ಟ್‌ ಚೆಕ್ ಮೂಲಕ ಗೊತ್ತಾಗಿದೆ. ಒಂದು ವೇಳೆ ಸಿದ್ದರಾಮಯ್ಯ ಈ ರೀತಿ ಹೇಳಿದ್ದರೆ ಮಾಧ್ಯಮಗಳಲ್ಲಿ ದೊಡ್ಡ ಸುದ್ದಿಯಾಗಬೇಕಿತ್ತು. ಆದರೆ ಯಾವ ಪತ್ರಿಕೆ ಹಾಗೂ ವಾಹಿನಿಗಳಲ್ಲೂ ಈ ರೀತಿ ಸುದ್ದಿ ಪ್ರಸಾರವಾಗಿಲ್ಲ. ”ಕಾಂಗ್ರೆಸ್ ಅಥವಾ ಸಿದ್ದರಾಮಯ್ಯನವರು ಹಿಂದುಗಳ ಮತ ಬೇಡ ಎನ್ನಲಿ’ ಎಂಬ ಸವಾಲು ಹಾಕಿರುವ ಸುದ್ದಿಗಳಷ್ಟೇ ಅಂತರ್ಜಾಲದಲ್ಲಿ ಲಭ್ಯವಾಗಿವೆ ಎನ್ನುವುದನ್ನು ‘ಕನ್ನಡ ಫ್ಯಾಕ್ಟ್‌ಚೆಕ್’ ಹೇಳಿದೆ.
ಈ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಸ್ಪಷ್ಟನೆ ನೀಡಿದ್ದು, ಈ ಬಗ್ಗೆ ಈಗಾಗಲೇ ದೂರು ನೀಡಿದ್ದೇನೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 2 ದಿನ ಗುಡುಗು ಸಹಿತ ಮಳೆ ; ಮುನ್ಸೂಚನೆ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement