ಬಿಜೆಪಿ ಸಂಘಟನೆ, ರಾಜ್ಯದ ಮುಂಬರುವ ಚುನಾವಣೆ ಬಗ್ಗೆ ನಡ್ಡಾ ಜೊತೆ ಚರ್ಚೆ: ಬಿಎಸ್‌ವೈ

ನವದೆಹಲಿ: ಮುಂದಿನ 8 ತಿಂಗಳಲ್ಲಿ ವಿಧಾನಸಭಾ ಚುನಾವಣೆ ಇದೆ. ಈ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆ ಹಾಗೂ ಮುಂದಿನ ಚುನಾವಣೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರೊಂದಿಗೆ ಚರ್ಚಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಶುಕ್ರವಾರ ದೆಹಲಿಯಲ್ಲಿ ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಗೆ ಇನ್ನು 8 ತಿಂಗಳು ಇದೆ. ಹೀಗಾಗಿ ನಡ್ಡಾ ಅವರನ್ನು ನಮ್ಮ ರಾಜ್ಯದಲ್ಲಿ ಹೆಚ್ಚು ಪ್ರವಾಸ ಮಾಡುವಂತೆ ಮನವಿ ಮಾಡಿದ್ದೇನೆ. ಆದರೆ ರಾಜ್ಯಾಧ್ಯಕ್ಷರ ಹುದ್ದೆ ಬಗ್ಗೆ ಚರ್ಚೆ ಮಾಡಿಲ್ಲ. ಪಕ್ಷವೇ ಈ ಬಗ್ಗೆ ತೀರ್ಮಾನ ಮಾಡಲಿದೆ ಎಂದು ಹೇಳಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರು ರಾಜ್ಯಕ್ಕೆ ಹೆಚ್ಚು ಸಮಯ ನೀಡುವ ಭರವಸೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ನಡ್ಡಾ ಇಬ್ಬರೂ ರಾಜ್ಯಕ್ಕೆ ಬರಲಿದ್ದಾರೆ. ಮಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮ ಯಶಸ್ವಿಗೊಳಿಸಬೇಕಿದ್ದು, ಮಾಡಿಕೊಂಡಿರುವ ತಯಾರಿ ಬಗ್ಗೆ ವರಿಷ್ಠರಿಗೆ ಮಾಹಿತಿ ನೀಡಿದ್ದೇನೆ ಎಂದು ತಿಳಿಸಿದರು.
ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆ ವಿಚಾರವಾಗಿ ಮಾತನಾಡಿದ ಯಡಿಯೂರಪ್ಪ, ಹೈಕೋರ್ಟ್ ಆದೇಶ ಸ್ವಾಗತಾರ್ಹವಾಗಿದೆ. ಎಲ್ಲರನ್ನೂ ಒಗ್ಗೂಡಿಸಲು ಗಣೇಶ ಹಬ್ಬವನ್ನು ಆಚರಿಸಲಾಗುತ್ತದೆ. ಅನಗತ್ಯ ಗೊಂದಲ ಮಾಡುವವರು ಮಾಡಿಕೊಳ್ಳುತ್ತಿರುತ್ತಾರೆ. ಜಾಗದ ವಿಚಾರವಾಗಿ ಜಗಳವಾಡುವುದರಲ್ಲಿ ಯಾವುದೇ ಅರ್ಥವಿಲ್ಲ. ಣೇಶ ಉತ್ಸವಕ್ಕೆ ಎಲ್ಲರೂ ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ಪ್ರಮುಖ ಸುದ್ದಿ :-   ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು

ಯಡಿಯೂರಪ್ಪ ಅವರು ಜೆ.ಪಿ ನಡ್ಡಾ ಭೇಟಿ ಬಳಿಕ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಭೇಟಿಯಾಗಿದ್ದಾರೆ. ಸಂತೋಷ್ ಅವರ ನಿವಾಸದಲ್ಲಿ ಭೇಟಿಯಾದ ಯಡಿಯೂರಪ್ಪ ಚರ್ಚೆ ನಡೆಸಿದ್ದಾರೆ. ಇಂದು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದ್ದು, ನಾಳೆ ಬೆಳಗ್ಗೆ ಬೆಂಗಳೂರಿಗೆ ವಾಪಸ್‌ ಆಗಲಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement