ಗ್ರಾಪಂ ಅಧ್ಯಕ್ಷ ಸ್ಥಾನ ವಿಚಾರವಾಗಿ ಬಡಿದಾಡಿಕೊಂಡ ಸದಸ್ಯರು; ಓರ್ವ ಅಸ್ವಸ್ಥ

ಹಾಸನ: ಹಳೇಬೀಡು ಗ್ರಾಮ ಪಂಚಾಯತ ಅಧ್ಯಕ್ಷ ಚುನಾವಣೆ ಬಳಿಕ ವಿಜಯೋತ್ಸವದ ವೇಳೆ ಬಿಜೆಪಿ ಹಾಗೂ ಜೆಡಿಎಸ್​ ಬೆಂಬಲಿತ ಸದಸ್ಯರ ನಡುವೆ ಗಲಾಟೆಯಾದ ಘಟನೆ ಜಿಲ್ಲೆಯ ಹಳೇಬೀಡು ಗ್ರಾಮದ ಹೋಯ್ಸಳ ವೃತ್ತದಲ್ಲಿ ನಡೆದ ವರದಿಯಾಗಿದೆ.
ಗಲಾಟೆಯಲ್ಲಿ ಓರ್ವ ಸದಸ್ಯನಿಗೆ ಗಾಯಗಳಾಗಿದ್ದು, ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಹಿಂದುಳಿದ (ಎ) ವರ್ಗಕ್ಕೆ ಮೀಸಲಾಗಿದ್ದ ಗ್ರಾಮ ಪಂಚಾಯತ ಅಧ್ಯಕ್ಷ ಸ್ಥಾನಕ್ಕೆ ಮೂವರ ನಡುವೆ ಪೈಪೋಟಿ ಏರ್ಪಟ್ಟಿತ್ತು. 20 ಸದಸ್ಯರ ಸಂಖ್ಯಾಬಲ ಹೊಂದಿರುವ ಹಳೇಬೀಡು ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ವಿಜಯಿ ಅಭ್ಯರ್ಥಿಯ ಹೆಸರು ಘೋಷಣೆ ಬಳಿಕ ಸದಸ್ಯರು ಗಲಾಟೆ ಮಾಡಿಕೊಂಡಿದ್ದಾರೆ. ವಿಜಯೋತ್ಸವದ ವೇಳೆ ಗಲಾಟೆ ನಡೆದಿದ್ದು ಗೆದ್ದ ಹಾಗೂ ಪರಾಜಿತ ಗುಂಪುಗಳ ನಡುವೆ ಮಾರಾಮಾರಿಯಾಗಿದೆ. ನಡುರಸ್ತೆಯಲ್ಲೇ ಹೊಡೆದಾಡಿಕೊಂಡಿದ್ದಾರೆ. ಗಲಾಟೆಯಲ್ಲಿ ಗಾಯಗೊಂಡು ಅಸ್ವಸ್ಥರಾಗಿ ಓರ್ವ ಸದಸ್ಯ ಕೆಳಗೆ ಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಹಳೇಬೀಡು ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement