
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆ.17 ಮತ್ತು 18ರಂದು ಅತಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಆಗಸ್ಟ್ 19 ಮತ್ತು 20ರಂದು ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಅತ್ಯಂತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ರೆಡ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಹಾಗೂ 21ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಅಲ್ಲದೆ, ಆಗಸ್ಟ್ 17 ಮತ್ತು 18ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್,ಹಾಸನ, ಕೊಡಗು ಜಿಲ್ಲೆಗಳಿಗೆ ಹಾಗೂ ಉತ್ತರ ಒಲಣಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ, ಆಗಸ್ಟ್ 19 ರಂದು ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ರೆಡ್ ಅಲರ್ಟ್ ನೀಡಲಾಗಿದೆ. ಹಾಗೂ ಕೊಡಗು, ಹಾಸನ, ಧಾರವಾಡ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗೆ ಯೆಲ್ಲೊ ಅಲರ್ಟ್ನ ಎಚ್ಚರಿಕೆ ನೀಡಲಾಗಿದೆ.
ಆಗಸ್ಟ್ 20 ರಂದು ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಬೀದರ, ಗದಗ, ಕಲಬುರಗಿ, ಕೊಪ್ಪಳ, ದಾವಣಗೆರೆ, ಹಾಸನ, ಕೊಡಗು ಜಿಲ್ಲೆಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ