ಹಿಜಾಬ್ ವಿವಾದ: ಬೆಳಗಾವಿ ಪ್ಯಾರಾಮೆಡಿಕಲ್ ಕಾಲೇಜಿಗೆ ರಜೆ ಘೋಷಣೆ

ಬೆಳಗಾವಿ: ಹಿಜಾಬ್ ವಿವಾದ ರಾಜ್ಯದ ಹಲವು ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ ಮುಂದುವರಿದಿದ್ದು, ಬೆಳಗಾವಿಯ ವಿಜಯ ಪ್ಯಾರಾಮೆಡಿಕಲ್ ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ ಘೋಷಿಸಲಾಗಿದೆ.
ಇಂದು ಶನಿವಾರ ವಿಜಯ ಪ್ಯಾರಾಮೆಡಿಕಲ್ ಕಾಲೇಜಿ ಹೈಡ್ರಾಮಾ ನಡೆಯಿತು. ಜಿಲ್ಲಾಡಳಿತ, ಪೊಲೀಸರು ಎಷ್ಟೇ ಪ್ರಯತ್ನಪಟ್ಟರೂ ವಿದ್ಯಾರ್ಥಿನಿಯರ ಮನವೊಲಿಸಲು ಸಾಧ್ಯವಾಗಲಿಲ್ಲ. ಹಿಜಾಬ್‌ಗೆ ಅನುಮತಿ ನೀಡಬೇಕೆಂದು ವಿದ್ಯಾರ್ಥಿಗಳು ಪಟ್ಟು ಹಿಡಿದರು. ಹಿಜಾಬ್ ಧರಿಸಿ ತರಗತಿಯಲ್ಲಿ ಕುಳಿತುಕೊಳ್ಳುತ್ತೇವೆ ಎಂದು ಹಠಬಿದ್ದ ವಿದ್ಯಾರ್ಥಿನಿಯರಿಗೆ ಹಿಜಾಬ್ ತೆಗೆಯಬೇಕೆಂದು ಪ್ರಾಂಶುಪಾಲರು ಮನವಿ ಮಾಡಿದರು. ಆದರೆ ವಿದ್ಯಾರ್ಥಿನಿಯರು ಒಪ್ಪಲಿಲ್ಲ. ಅವರನ್ನು ತರಗತಿ ಒಳಗೆ ಬಿಡಲಿಲ್ಲ. ನಂತರ ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ ಘೋಷಿಸಲಾಯಿತು.

ಕಳೆದ ಮೂರು ದಿನಗಳಿಂದ ಹಲವು ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿಗೆ ಹಿಜಾಬ್ ಮತ್ತು ಬುರ್ಖಾ ಧರಿಸಿಕೊಂಡು ಬರುತ್ತಿದ್ದಾರೆ, ತರಗತಿಯೊಳಗೆ ಬರುವಾಗ ಬುರ್ಖಾ, ಹಿಜಾಬ್ ತೆಗೆದು ಬನ್ನಿ ಎಂದು ಕಾಲೇಜು ಆಡಳಿತ ಮಂಡಳಿ ಹೇಳಿದರೂ ಒಪ್ಪದೆ ಘೋಷಣೆ ಕೂಗುತ್ತಿದ್ದಾರೆ. ಬೆಳಗಾವಿಯ ಜಿಲ್ಲಾಧಿಕಾರಿಗಳು ಪರಿಸ್ಥಿತಿ ಸಹಜ ಸ್ಥಿತಿಗೆ ಬರುವವರೆಗೆ ಸಂಸ್ಥೆಯನ್ನು ಬಂದ್‌ ಮಾಡುವಂತೆ ಕಾಲೇಜು ಆಡಳಿತ ಮಂಡಳಿಗೆ ಸೂಚಿಸಿದ್ದಾರೆ. ಶನಿವಾರ ಸಂಸ್ಥೆ ಹೊರಡಿಸಿದ ಮಾರ್ಗಸೂಚಿಗಳನ್ನು ಅನುಸರಿಸಲು ಇಚ್ಛಿಸದ ವಿದ್ಯಾರ್ಥಿನಿಯರ ಗುಂಪು ಹಿಜಾಬ್ ಮತ್ತು ಬುರ್ಖಾವನ್ನು ಧರಿಸಿ ಮತ್ತೆ ಕಾಲೇಜಿಗೆ ಬಂದ ನಂತರ ಸಂಸ್ಥೆಗೆ ಅನಿರ್ದಿಷ್ಟಾವಧಿ ರಜೆ ಘೋಷಿಸಲು ಆಡಳಿತ ಮಂಡಳಿ ನಿರ್ಧರಿಸಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌: ವೀಡಿಯೊ ನೀಡಿದ್ದು ನಾನೇ ಎಂದಿದ್ದ ಮಾಜಿ ಕಾರು ಚಾಲಕ ಕಾರ್ತಿಕ್ ನಾಪತ್ತೆ...!?

ಮುಸ್ಲಿಂ ವಿದ್ಯಾರ್ಥಿನಿಯರಿಗೆ ಅವರ ಪೋಷಕರು ಬೆಂಗಾವಲಾಗಿ ನಿಂತಿದ್ದಾರೆ. ಎರಡು ದಿನಗಳ ಹಿಂದೆ, ಹಿಜಾಬ್ ಧರಿಸಿದ ಹುಡುಗಿಯರನ್ನು ತರಗತಿಯೊಳಗೆ ಬಿಡುವಂತೆ ಕಾಲೇಜು ಆಡಳಿತ ಮಂಡಳಿ ಮತ್ತು ಪೊಲೀಸರ ಮೇಲೆ ಒತ್ತಡ ಹೇರಲು ಯತ್ನಿಸಿದಾಗ ಬೆಳಗಾವಿ ಪೊಲೀಸರು ಆರು ಮಂದಿಯನ್ನು ಕಸ್ಟಡಿಗೆ ತೆಗೆದುಕೊಂಡಿದ್ದರು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement