ಕಾರವಾರ :ಭಾರತೀಯ ಹವಾಮಾನ ಇಲಾಖೆ (IMD) ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿ ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಆಗಸ್ಟ್ 28ರಂದು ಜಿಲ್ಲೆಯ 10 ತಾಲೂಕುಗಳ ಪ್ರಾಥಮಿಕ, ಪ್ರೌಢ ಶಾಲೆಗಳು, ಅಂಗನವಾಡಿಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೊಯಿಡಾ ಮತ್ತು ದಾಂಡೇಲಿ ತಾಲೂಕುಗಳ ಎಲ್ಲ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢ ಶಾಲೆಗಳು, ಮತ್ತು ಪದವಿಪೂರ್ವ ಕಾಲೇಜುಗಳಿಗೆ ಆಗಸ್ಟ್ 28ರಂದು ರಜೆ ಘೋಷಿಸಲಾಗಿದೆ.
ನಿರಂತರವಾಗಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತು ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ