ಉಡುಪಿ : ಮಹೇಶ ಶೆಟ್ಟಿ ತಿಮರೋಡಿಗೆ ಜಾಮೀನು

ಉಡುಪಿ : ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿದ್ದ ಮಹೇಶ ಶೆಟ್ಟಿ ತಿಮರೋಡಿಗೆ ಉಡುಪಿ ನ್ಯಾಯಾಲಯವು ಶನಿವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಬಿ.ಎಲ್.ಸಂತೋಷ ವಿರುದ್ಧ ತಿಮರೋಡಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಉಡುಪಿ ಗ್ರಾಮಾಂತರ ಘಟಕದ ಅಧ್ಯಕ್ಷ ರಾಜೀವ ಕುಲಾಲ ಅವರು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ತಿಮರೋಡಿ ಅವರನ್ನು ಅವರ ನಿವಾಸದಲ್ಲಿ ಬಂಧಿಸಲಾಗಿತ್ತು.
ಜಾಮೀನು ಮಂಜೂರು ಮಾಡುವಾಗ, ನ್ಯಾಯಾಧೀಶರು ತಿಮರೋಡಿ ಅವರಿಗೆ ಇಂತಹ ಹೇಳಿಕೆಗಳನ್ನು ಭವಿಷ್ಯದಲ್ಲಿ ಪುನರಾವರ್ತಿಸದಂತೆ ಎಚ್ಚರಿಸಿದ್ದಾರೆ. ಹಾಗೂ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದ್ದಾರೆ.
ಬಿ.ಎಲ್‌. ಸಂತೋಷ (BL Santosh) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಮಹೇಶ್‌ ಶೆಟ್ಟಿ ತಿಮರೋಡಿ ಅವರಿಗೆ ಎರಡು ಬಾರಿ ನೋಟಿಸ್‌ ನೀಡಿದರೂ ಉತ್ತರಿಸಿದ ಕಾರಣ ಬ್ರಹ್ಮಾವರ ಪೊಲೀಸರು ಉಜಿರೆಯ ನಿವಾಸದಲ್ಲಿ ಗುರುವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement